Wednesday, April 30, 2025
34.5 C
Bengaluru
LIVE
ಮನೆ#Exclusive NewsTop Newsರೇಣುಕಾಸ್ವಾಮಿ ಹತ್ಯೆ ಪ್ರಕರಣ: ಶೆಡ್ ಮಾಲೀಕ ಪಟ್ಟಣಗೆರೆ ಜಯಣ್ಣಗೆ BBMP ನೋಟಿಸ್!

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಶೆಡ್ ಮಾಲೀಕ ಪಟ್ಟಣಗೆರೆ ಜಯಣ್ಣಗೆ BBMP ನೋಟಿಸ್!

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ಈ ನಡುವಲ್ಲೇ ಹತ್ಯೆಯಾದ ಸ್ಥಳವಾದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟೀಸ್ ಜಾರಿ ಮಾಡಿದೆ.

ಆರ್‌.ಆರ್‌.ನಗರದ ಪಟ್ಟಣಗೆರೆ ಮುಖ್ಯ ರಸ್ತೆಯ ಹೆಮ್ಮಿಗೆಪುರದಲ್ಲಿರುವ ಶೆಡ್‌ ಮೇಲಿನ ಆಸ್ತಿ ತೆರಿಗೆ ಪಾವತಿಸುವಂತೆ ಜಯಣ್ಣ ಅವರಿಗೆ ಬಿಬಿಎಂಪಿ ನೋಟಿಸ್​ ಜಾರಿ ಮಾಡಿದೆ. ಪಟ್ಟಣಗೆರೆ ಶೆಡ್ ಮಾಲೀಕ ಕೆ ಜಯಣ್ಣ ಅವರು ನಿಗದಿಯ ಜಾಗಕ್ಕೆ ಪಾಲಿಕೆಗೆ ಆಸ್ತಿ ತೆರಿಗೆಗೆ ಪಾವತಿಸಿಲ್ಲ. ಈ ಹಿನ್ನೆಲೆ ಆರ್ ಆರ್ ನಗರ ವಲಯ ಸಹಾಯಕ ಕಂದಾಯ ಅಧಿಕಾರಿ ಕೆ ಜಯಣ್ಣಗೆ ನೋಟೀಸ್ ಜಾರಿ ಮಾಡಿದ್ದಾರೆ.

2008ರಿಂದ ಈ ಸ್ವತ್ತಿಗೆ ಇದುವರೆಗೂ ಕೂಡ ಆಸ್ತಿ ತೆರಿಗೆ ಪಾವತಿಯಾಗಿಲ್ಲ. ಈ ಹಿನ್ನೆಲೆ 15 ದಿನಗಳ ಅವಧಿಯ ಒಳಗಾಗಿ ಸಂಬಂಧಪಟ್ಟ ದಾಖಲೆ ಹಾಗೂ ಕಾರಣ ನೀಡುವಂತೆ ನೋಟೀಸ್ ನೀಡಿದ್ದಾರೆ. ಕಂದಾಯ ನಿರೀಕ್ಷಕರು ಜಯಣ್ಣ ಅವರಿಗೆ ಖುದ್ದಾಗಿ ನೋಟಿಸ್ ನೀಡಿದ್ದು, ಅವರಿಂದ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಕೇಳಿದ್ದಾರೆ ಎಂದು ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಜಮೀನು ಈಗ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದು, 2009ರಿಂದ ಅನ್ವಯವಾಗುವ ತೆರಿಗೆಯನ್ನು ಪಾಲಿಕೆ ನಿಯಮಗಳ ಪ್ರಕಾರ ಸಂಗ್ರಹಿಸಲಾಗುವುದು ಎಂದು ಬಿಬಿಎಂಪಿಯ ಕೆಂಗೇರಿ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments