Wednesday, January 28, 2026
18.8 C
Bengaluru
Google search engine
LIVE
ಮನೆಸಿನಿಮಾಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು ಗೊತ್ತಾ?

ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು ಗೊತ್ತಾ?

ಬೆಂಗಳೂರು :   ‘ಕಲ್ಕಿ 2898 ಎಡಿ’  ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ ಈ ಸೈನ್ಸ್‌ ಫಿಕ್ಷನ್‌ ದಾಖಲೆಯ ಕಲೆಕ್ಷನ್‌ ಮಾಡಿದೆ. ಅದರಲ್ಲಿಯೂ ಚಿತ್ರ ಬಿಡುಗಡೆಯಾಗಿ 5 ದಿನ ಕಳೆದರೂ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಐದು ದಿನಕ್ಕೆ 625 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಆರನೇ ದಿನದ ಗಳಿಕೆಯ ಲೆಕ್ಕಾಚಾರ ಸಿಕ್ಕಿದೆ.

ವರದಿ ಪ್ರಕಾರ ‘ಕಲ್ಕಿ 2898 ಎಡಿ’ ಚಿತ್ರ ಆರನೇ ದಿನಕ್ಕೆ 27.85 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತೆಲುಗು ಭಾಷೆಯಿಂದ 11.2 ಕೋಟಿ ಕಲೆಕ್ಷನ್ ಆಗಿದೆ. ತಮಿಳು, ಮಲಯಾಳಂನಿಂದ ತಲಾ 1.2 ಕೋಟಿ ರೂಪಾಯಿ, ಹಿಂದಿಯಿಂದ 14 ಕೋಟಿ ರೂಪಾಯಿ ಸಿಕ್ಕಿದೆ. ಕನ್ನಡ ವರ್ಷನ್​ನಿಂದ ಸಿಕ್ಕಿರುವುದು ಕೇವಲ 25 ಲಕ್ಷ ರೂಪಾಯಿ ಮಾತ್ರ. 5ನೇ ದಿನವಾದ ಸೋಮವಾರ (ಜುಲೈ 2) ʼಕಲ್ಕಿʼ ಚಿತ್ರ ಜಾಗತಿಕವಾಗಿ ಬರೋಬ್ಬರಿ 84 ಕೋಟಿ ರೂ. ಗಳಿಸಿತ್ತು. ಈ ಮೂಲಕ ಮಲ್ಟಿ ಸ್ಟಾರರ್‌ ಚಿತ್ರ ಒಟ್ಟು 635 ಕೋಟಿ ರೂ. ಬಾಚಿಕೊಂಡಿತ್ತು.

ಸೋಮವಾರ ಭಾರತವೊಂದರಲ್ಲೇ ʼಕಲ್ಕಿʼ ಸುಮಾರು 34.6 ಕೋಟಿ ರೂ. ಗಳಿಸಿದೆ ಎಂದು ವರದಿಯೊಂದು ತಿಳಿಸಿತ್ತು. ʼʼಸೋಮವಾರ ಭಾರತದಲ್ಲಿ ಎಲ್ಲ ಭಾಷೆಗಳಲ್ಲಿ ಸೇರಿ ಸೇರಿ ಸುಮಾರು 34.6 ಕೋಟಿ ರೂ. ಬಾಚಿಕೊಂಡಿದೆ. ಇನ್ನು ಜಗತ್ತಿನ ವಿವಿಧ ಕಡೆಗಳ ಕಲೆಕ್ಷನ್‌ 45-50 ಕೋಟಿ ರೂ. ಹೀಗೆ ಒಂದೇ ದಿನ ಸುಮಾರು 84 ಕೋಟಿ ರೂ. ಬಾಚಿಕೊಂಡಿದ್ದು, ಒಟ್ಟು ಕಲೆಕ್ಷನ್‌ 635 ಕೋಟಿ ರೂ,ಗೆ ತಲುಪಿದೆʼʼ ಎಂದು ವರದಿ ತಿಳಿಸಿದೆ. ಅಧಿಕೃತ ಹೇಳಿಕೆ ಇನ್ನಷ್ಟೇ ಹೊರ ಬರಬೇಕಿದೆ. ಚಿತ್ರವನ್ನು ಸುಮಾರು 600 ಕೋಟಿ ರೂ. ಬಜೆಟ್‌ನಲ್ಲಿ ತಯಾರಿಸಲಾಗಿದ್ದು, ಈಗಾಗಲೇ ಹಾಕಿದ ದುಡ್ಡು ವಾಪಸ್‌ ಬಂದಂತಾಗಿದೆ.

ಮೊದಲ ದಿನ ಭರ್ಜರಿ 191 ಕೋಟಿ ರೂ. ಗಳಿಸಿದ ʼಕಲ್ಕಿʼ ಆ ಮೂಲಕ ಸ್ಯಾಂಡಲ್‌ವುಡ್‌ನ ʼಕೆಜಿಎಫ್‌ 2ʼ (159 ಕೋಟಿ ರೂ.), ʼಸಲಾರ್‌ʼ (158 ಕೋಟಿ ರೂ.), ʼಲಿಯೋʼ (142.75 ಕೋಟಿ ರೂ.), ʼಸಾಹೋʼ (130 ಕೋಟಿ ರೂ.) ಮತ್ತು ʼಜವಾನ್‌ʼ (129 ಕೋಟಿ ರೂ.) ದಾಖಲೆ ಮುರಿದೆ. ಅದಾಗ್ಯೂ 223 ಕೋಟಿ ರೂ. ಕಲೆಕ್ಷನ್‌ ಮಾಡಿದ ʼಆರ್‌ಆರ್‌ಆರ್‌ʼ ಮತ್ತು 217 ಕೋಟಿ ರೂ. ಗಳಿಸಿದ ʼಬಾಹುಬಲಿ 2ʼ ಈಗಲೂ ಮೊದಲ ದಿನದ ಕಲೆಕ್ಷನ್‌ ವಿಚಾರದಲ್ಲಿ ಮೊದಲೆರಡು ಸ್ಥಾನಗಳಲ್ಲಿ ಭದ್ರವಾಗಿವೆ.

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್‌ ಕಟ್‌ ಹೇಳಿರುವ ʼಕಲ್ಕಿʼಯಲ್ಲಿ ಬಹುತಾರಾಗಣವಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ತಾರೆಗಳಾದ ಕಮಲ್‌ ಹಾಸನ್‌, ಶೋಭನಾ ಮತ್ತಿತರರು ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments