ಹಾಸನ: ಹಾಸನ ನಗರದಲ್ಲಿ ಗುರುವಾರ ಬೆಳಗ್ಗೆ ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಾಸನದ ಹೇಮಾವತಿನಗರದಲ್ಲಿ ಘಟನೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ರೌಡಿ ರವಿ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಆತ ಅಲ್ಲೇ ಕೊಲೆಯಾಗಿದ್ದಾನೆ. ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೂರು ದಾಖಲಿಸುತ್ತಿದ್ದಾರೆ.