ಸಿನಿಮಾಸುದ್ದಿ

ಯಾವಾಗ ಓಟಿಟಿಗೆ ಬರಲಿದೆ ಪೃಥ್ವಿರಾಜ್ ನಟನೆಯ ‘ಆಡು ಜೀವಿತಂ’ ಸಿನಿಮಾ? ಇಲ್ಲಿದೆ ಬ್ಯಾಡ್ ನ್ಯೂಸ್

ಮಲಯಾಳಂ ಸೂಪರ್‌ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್  ಅಭಿನಯದ ಆಡು ಜೀವಿತಂ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಬ್ಲೆಸ್ಸಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಾರ್ಚ್ 28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ‘ಆಡು ಜೀವಿತಂ’ ಸಿನಿಮಾ ಮೆಚ್ಚುಗೆ ಪಡೆಯಿತು. 100 ಕೋಟಿ ರೂಪಾಯಿ ಗಳಿಕೆ ಮಾಡಿದ ಮಲಯಾಳಂನ ಕೆಲವೇ ಕೆಲವು ಸಿನಿಮಾಗಳಲ್ಲಿ ಇದು ಕೂಡ ಒಂದು. ಈ ಸಿನಿಮಾದ ಒಟಿಟಿ ರಿಲೀಸ್ ಬಗ್ಗೆ ಮಾಹಿತಿ ಸಿಕ್ಕಿದೆ.

ಸಿನಿಮಾ ಬಿಡುಗಡೆ ಆದ ಬಳಿಕ ಒಟಿಟಿ ಬಗ್ಗೆ ಚರ್ಚೆ ಶುರುವಾಗುತ್ತದೆ. ಥಿಯೇಟರ್​ನಲ್ಲಿ ಸಿನಿಮಾ ಮೆಚ್ಚುಗೆ ಪಡೆದು, ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದರೆ ಸಿನಿಮಾ ಒಟಿಟಿ ರಿಲೀಸ್ ದಿನಾಂಕ ವಿಳಂಬ ಆಗುತ್ತದೆ. ಅದೇ ರೀತಿ ‘ಆಡು ಜೀವಿತಂ’ ಸಿನಿಮಾಗಾಗಿ ಕೆಲವರು ಕಾಯುತ್ತಿದ್ದಾರೆ. ಜನಪ್ರಿಯ OTT ಪ್ಲಾಟ್‌ಫಾರ್ಮ್ ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಪೃಥ್ವಿರಾಜ್ ನಟನೆಯ ಈ ಸಿನಿಮಾದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ.

ಮೇ 10ಕ್ಕೆ ‘ಆಡು ಜೀವಿತಂ’ ಸಿನಿಮಾ ಒಟಿಟಿಗೆ ಬರಲಿದೆ ಎಂದು ಸುದ್ದಿ ಆಗಿತ್ತು. ಆದರೆ ಈಗ ದಿನಾಂಕ ಬದಲಾಗಿದೆ. ಈ ಬ್ಲಾಕ್‌ಬಸ್ಟರ್ ಚಿತ್ರ ಮೇ 26ರಿಂದ ಸ್ಟ್ರೀಮ್ ಆಗಲಿದೆಯಂತೆ. ಈ ಸಿನಿಮಾ ಮಲಯಾಳಂ ಜೊತೆ ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಪ್ರಸಾರ ಕಾಣಲಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆಯಂತೆ. ಡಿಸ್ನಿ ಪ್ಲಸ್ ಹಾಟ್​ಸ್ಟಾರ್ 30 ಕೋಟಿ ರೂಪಾಯಿ ಪಡೆದುಕೊಂಡಿದೆ.

ಪೃಥ್ವಿರಾಜ್ ಸುಕುಮಾರ್ ನಟನೆಯ ಈ ಸಿನಿಮಾದಲ್ಲಿ ಅಮಲಾ ಪೌಲ್ ನಟಿಸಿದ್ದಾರೆ. ಅಲ್ಲದೆ, ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್, ಕೆಆರ್ ಗೋಕುಲ್, ಅರಬ್ ನಟರಾದ ತಾಲಿಬ್ ಅಲ್ ಬಲೂಶಿ, ರಿಕ್ ಅಬೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವನ್ನು ಕನ್ನಡದಲ್ಲಿ ‘ಹೊಂಬಾಳೆ ಫಿಲ್ಮ್ಸ್’ ಬಿಡುಗಡೆ ಮಾಡಿದೆ. ಪೃಥ್ವಿರಾಜ್ ಸುಕುಮಾರನ್ ಈ ಚಿತ್ರಕ್ಕಾಗಿ 31 ಕೆಜಿ ತೂಕ ಇಳಿಸಿಕೊಂಡಿದ್ದರು. ಈ ಸಿನಿಮಾಗೆ ನಿರ್ದೇಶಕರು ಹಲವು ವರ್ಷ ಮುಡಿಪಿಟ್ಟಿದ್ದಾರೆ.

Comments (0)

Your email address will not be published. Required fields are marked *

Back to top button