ಹಾಸನ : ಅಶ್ಲೀಲ ವಿಡಿಯೋ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಕುಟುಂಬದ ಸದಸ್ಯರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಮಧ್ಯೆ, ಪ್ರಮುಖ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ಬಂದು ಬೆಂಗಳೂರಿನಲ್ಲಿ ಎಸ್ಐಟಿ ವಶವಾಗಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕಿಡ್ನ್ಯಾಪ್ ಪ್ರಕರಣದಲ್ಲಿ ಸಿಲುಕಿರುವ ಭವಾನಿ ರೇವಣ್ಣ ಕಳೆದ 15 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ತಲೆಮರೆಸಿಕೊಂಡಿರುವುಸು ಎಸ್ಐಟಿ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.
ಆ ನಂತರ, ಅಂದರೆ ಮೇ 8 ರಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಜೈಲುಪಾಲಾಗಿದ್ದ ಪತಿ ರೇವಣ್ಣರನ್ನು ಬೇಟಿಯಾಗಲೂ ಬಂದಿಲ್ಲ. ಆ ಬಳಿಕ ರೇವಣ್ಣ ಜೈಲಿನಿಂದ ಬಿಡುಗಡೆ ಆದರೂ ಅವರನ್ನು ಬೇಟಿಯಾಗಲು ಭವಾನಿ ಬಂದಿಲ್ಲ. ಸದ್ಯ ಅವರು ನಿಗೂಢ ಸ್ಥಳದಲ್ಲಿ ಇದ್ದಾರೆ ಎನ್ನಲಾಗಿದೆ.
ಮತ್ತೊಂದೆಡೆ, ಭವಾನಿ ರೇವಣ್ಣ ಎಲ್ಲಿದ್ದಾರೆಂಬ ಬಗ್ಗೆ ಮಾಹಿತಿ ಕಲೆ ಹಾಕಲು ಎಸ್ಐಟಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ನ್ಯಾಯಾಲಯದಲ್ಲಿ ಇಂದು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದರೆ ಭವಾನಿ ರೇವಣ್ಣ ಬಂಧನ ಸಾದ್ಯತೆ ಇದೆ. ಹೀಗಾಗಿಯೇ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ, ಭವಾನಿಗೆ ಎಸ್ಐಟಿ ಮೊದಲ ನೊಟೀಸ್ ನೀಡಿದ್ದು, ಜೂನ್ 1 ರಂದು ಖುದ್ದು ಮನೆಯಲ್ಲಿ ಹಾಜರಿರಬೇಕು ಎಂದು ಸೂಚನೆ ನೀಡಿದೆ.