ನವದೆಹಲಿ: ಮುಖ್ಯಮಂತ್ರಿ ಸ್ಥಾನದಿಂದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಇಡಿಯಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ದೆಹಲಿಯ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಮನವಿಯನ್ನು ದೆಹಲಿ ಹೈಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. ಅರ್ಜಿದಾರರು ನ್ಯಾಯಾಲಯವನ್ನು ರಾಜಕೀಯಕ್ಕೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೈಕೋರ್ಟ್ ಹೇಳಿತ್ತು ಮತ್ತು 50,000 ರೂ. ದಂಡವನ್ನು ವಿಧಿಸಲು ಮುಂದಾಯಿತು. ಈ ಹಿನ್ನೆಲೆ ಸುಪ್ರೀಂ ಕೋರ್ಟ್‌ಗೆ ತ್ವರಿತ ಮೇಲ್ಮನವಿ ಸಲ್ಲಿಸಲಾಗಿತ್ತು.




