ಕ್ರೈಂ ಸ್ಟೋರಿರಾಜ್ಯಸುದ್ದಿ

ಕಾರ್ಪೋರೇಟರ್​ ಮಗಳ ಭೀಕರ ಕೊಲೆ!

ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿಯನ್ನು ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಹಾಡಹಗಲೆ ಹುಬ್ಬಳ್ಳಿಯ  ಬಿವಿಬಿ ಕಾಲೇಜ್ ನಲ್ಲಿರುವಾಗಲೇ ನೇಹಾ ಹಿರೇಮಠ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.  ಸದ್ಯ ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ‌ ಮುಗಿಲು ಮುಟ್ಟಿದೆ. ಇನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು, ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ನೇಹಾ ಹಿರೇಮಠ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್‌ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದಾನೆ. ಹೀಗಾಗಿ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ. ಕಳೆದ ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದ್ರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

Comments (0)

Your email address will not be published. Required fields are marked *

Back to top button