Wednesday, April 30, 2025
30.3 C
Bengaluru
LIVE
ಮನೆಸುದ್ದಿಒಂಟೆ ಸವಾರಿ ಬಳಿಕ ಕಾಣೆಯಾಗಿದ್ದ 3 ಮಕ್ಕಳು UGD ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವವಾಗಿ...

ಒಂಟೆ ಸವಾರಿ ಬಳಿಕ ಕಾಣೆಯಾಗಿದ್ದ 3 ಮಕ್ಕಳು UGD ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವವಾಗಿ ಪತ್ತೆ!

ವಿಜಯಪುರ : ವಿಜಯಪುರದ ಚಾಬಕಸಾಬ್ ದರ್ಗಾದ ಬಳಿ ನಿನ್ನೆ ಒಂಟೆ ಸವಾರಿ ಮಾಡಿದ್ದ ಮೂವರು ಮಕ್ಕಳು ನಂತರ ಕಾಣೆಯಾಗಿದ್ದರು. ಆದರೆ ಇಂದು ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.

ವಿಜಯನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವಗಳು ಪತ್ತೆಯಾಗಿದ್ದು ಮೃತರನ್ನು ಗದಗ ಮೂಲದ 9 ವರ್ಷದ ಅನುಷ್ಕಾ ಅನಿಲ ದಹಿಂಡೆ 7 ವರ್ಷದ ವಿಜಯ ಅನಿಳ ದಹಿಂಡೆ ಮತ್ತು ವಿಜಯಪುರ ಮೂಲದ 7 ವರ್ಷದ ಮಿಹಿರ್ ಶ್ರೀಕಾಂತ ಜಾನಗೌಳಿ ಎಂದು ಗುರುತಿಸಲಾಗಿದೆ.

ಇಂದು ಮಕ್ಕಳ ಶವಗಳು ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ರೋಧನೆ ಮುಗಿಲು ಮಟ್ಟಿದೆ. ಇದೇ ವೇಳೆ ಯುಜಿಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಎದುರು ಮೃತ ಮಕ್ಕಳ ಪೋಷಕರಿಂದ ಪ್ರತಿಭಟನೆ ಮಾಡಿದ್ದರು. ಸಂಸ್ಕರಣಾ ಘಟಕದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ತ್ಯಾಜ್ಯ ಘಟಕಕ್ಕೆ ತಡೆಗೋಡೆ ಅಥವಾ ಬೇಲಿ ಹಾಕಿಲ್ಲ. ಹೀಗಾಗಿ ಮೂವರು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿವೆ. ಮಹಾನಗರ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿಗಳು ಇದಕ್ಕೆ ಕಾರಣವೆಂದು ಮಕ್ಕಳ ಕುಟುಂಬಸ್ಥರು ಆರೋಪಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments