ರಾಜಕೀಯರಾಜ್ಯಸುದ್ದಿ

ತಂದೆಯ ಆರೋಗ್ಯಕ್ಕೆ ಪ್ರಾರ್ಥಿಸಿದವರಿಗೆ ನಿಖಿಲ್​ ಕೃತಜ್ಞತೆ

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆಯಶಸ್ವಿಯಾಗಿ ಜರುಗಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ. ಸದ್ಯ ಮಾಜಿ ಸಿಎಂ. ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ.
ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ನಿಖಿಲ್​ ಕುಮಾರಸ್ವಾಮಿ ಟ್ವೀಟ್​ ಮಾಡಿ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button