ಕ್ರೈಂ ಸ್ಟೋರಿಸಿನಿಮಾಸುದ್ದಿ
ಅಂಜಲಿ ಕೊಲೆ ಪ್ರಕರಣ ; ಸಿಐಡಿ ಅಧಿಕಾರಿಗಳ ಬಳಿ ಹತ್ಯೆ ರಹಸ್ಯ ಬಾಯ್ಬಿಟ್ಟ ಆರೋಪಿ ವಿಶ್ವ!

ಹುಬ್ಬಳ್ಳಿ : ಹುಬ್ಬಳ್ಳಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಕೊಲೆಯ ರಹಸ್ಯದ ಬಗ್ಗೆ ವಿಶ್ವ ಬಾಯ್ಬಿಟ್ಟಿದ್ದಾನೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ರೈಲಿನಲ್ಲಿ ಕಿರಿಕ್ ಮಾಡಿ ತಪ್ಪಿಸಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ವಿಶ್ವ ಪೊಲೀಸ್ ಬಲೆಗೆ ಬಿದ್ದಿದ್ದ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯ ತನಖೆಯ ಹೊಣೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಅದರಂತೆ, ನ್ಯಾಯಾಲಯದ ಅನುಮತಿ ಪಡೆದು ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಆಗಮಿಸಿರುವ ಸಿಐಡಿ ಎಸ್‌ಪಿ ವೆಂಕಟೇಶ್ ನೇತೃತ್ವದ ಅಧಿಕಾರಿಗಳ ತಂಡ ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿತು.
ತನಿಖಾಧಿಕಾರಿಗಳ ಬಳಿ ಮಾತನಾಡಿದ ವಿಶ್ವ, ಅಂಜಲಿಯನ್ನು ನಾನು ಮೈಸೂರಿಗೆ ಬಾ ಎಂದು ಕರೆದೆ. ಆಕೆ ಬರಲಿಲ್ಲ. ಹಾಗಾಗಿ ಕೊಲೆ ಮಾಡಿದೆ ಎಂದಿದ್ದಾನೆ. ಅಂಜಲಿ ಕೊಲೆಯಾಗುವ ಹಿಂದಿನ ದಿನವೇ ಅಂಜಲಿಗೆ ವಿಶ್ವ 1000 ರೂಪಾಯಿ ಫೋನ್ ಪೇ ಮಾಡಿದ್ದ. 1000 ಹಣ ತೆಗೆದುಕೊಂಡು ನಂತರ ಆಕೆ ಆತನನ್ನು ಬ್ಲಾಕ್ ಮಾಡಿದ್ದಳು. ಅದೇ ಕಾರಣಕ್ಕೆ ಸಿಟ್ಟು ಬಂದು ಕೊಲೆ ಮಾಡಿದ್ದೇನೆ ಎಂದು ವಿಶ್ವ ಸಿಐಡಿ ಅಧಿಕಾರಿಗಳ ಬಳಿ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.




