Wednesday, January 28, 2026
18.8 C
Bengaluru
Google search engine
LIVE
ಮನೆರಾಜಕೀಯಜನ ಪ್ರಬುದ್ಧರಾಗಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸ್ತಾರೆ - ಈಶ್ವರ್​ ಖಂಡ್ರೆ

ಜನ ಪ್ರಬುದ್ಧರಾಗಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸ್ತಾರೆ – ಈಶ್ವರ್​ ಖಂಡ್ರೆ

ಕಲಬುರಗಿ : ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿ ಲೋಕಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇಡಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಅಲೆ ಇದೆ. ರಾಜ್ಯದಲ್ಲಿ ಸರ್ಕಾರ ರಚನೆ ಆದ್ಮೇಲೆ ನಾವು ನುಡಿದಂತೆ ನಡೆದಿದ್ದೇವೆ ಕೊಟ್ಟ ಬರವಸೆಯನ್ನು ಈಡೇರಿಸಿದ್ದೇವೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯಿಂದ ಜನ ಬೇಸತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಸರ್ವಾಧಿಕಾರಿ ಧೋರಣೆ ನಡಿತಾ ಇದೆ ಪ್ರತಿಪಕ್ಷಗಳ ಧ್ವನಿ ಹತ್ತಿಕ್ಕು ಕೆಲಸ ನಡಿತಾ ಇದೆ. ಹೀಗಾಗಿ ಜನ ಕಾಂಗ್ರೆಸ್ ಪಕ್ಷವನ್ನ ಗೆಲ್ಲಿಸ್ತಾರೆ ಕಾಂಗ್ರೆಸ್ ಪಕ್ಷದ ಗೆಲುವು ಪ್ರಜಾಪ್ರಭುತ್ವದ ಗೆಲುವು, ಸಂವಿಧಾನದ ಗೆಲುವು, ರಾಜ್ಯದ ಎಲ್ಲಾ ಕಡೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಗೆಲ್ತಾರೆ ಅಂತ ಈಶ್ವರ ಕಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಬಿಜೆಪಿಯವರು ಸುಳ್ಳೇ ಸತ್ಯ ಅಂತ ಬಿಂಬಿಸುತ್ತಿದ್ದಾರೆ. ಹಣಬಲ, ತೋಳ್ಬಲ, ಅಧಿಕಾರ ದುರ್ಬಳಕೆ ಇದೆಲ್ಲದರಿಂದ ಮತ್ತೆ ಗೆಲ್ತಿವಿ ಎನ್ನುವ ಭ್ರಮೆಯಲ್ಲಿ ಇದ್ದಾರೆ. ಜನ ಪ್ರಭುದ್ಧರಾಗಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸ್ತಾರೆ, ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ನಲ್ಲಿ ಯಾವುದೇ ತರಹದ ಅಸಮಾಧಾನವಿಲ್ಲ ಎಂದರು.

ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾಶಪ್ಪನವರ್ ಜೊತೆ ನಾವು  ಮಾತನಾಡಿದ್ದೇವೆ ವರಿಷ್ಠರು ಮಾತ್ನಾಡ್ತಾರೆ ಹೀಗಾಗಿ ಅವರು ಕಾಂಗ್ರೆಸ್ ಜೊತೆ ಇರ್ತಾರೆ. ಯುವಕರಿಗೆ ಅವಕಾಶ ಮಾಡಿಕೊಡಬೇಕು ಅನ್ನೋ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ತೀರ್ಮಾನ ಮಾಡಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನವನ್ನು ನಾನು ಖಂಡಿಸುತ್ತೇನೆ ಎಂದು ಈಶ್ವರ್​ ಖಂಡ್ರೆ ಹೇಳಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments