ಕಲಬುರಗಿ : ಜಿಲ್ಲೆಯ ಆಳಂದ ಪಟ್ಟಣದ ಸಮತಾ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಧುರಿ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆ ಆಂದಳಾಗಾಂವ್ ಗ್ರಾಮದ ನಿವಾಸಿಯಾದ ಮಾಧುರಿಯು ಸಮತಾ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಂಎಸ್ ಅಧ್ಯಯನ ಮಾಡುತ್ತಿದ್ದರು. ಈ ಕಾಲೇಜು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರ, ಶಾಸಕ ಬಿ.ಆರ್.ಪಾಟೀಲ್ ಅವರಿಗೆ ಸೇರಿದೆ.
ಹಾಸ್ಟೆಲ್ ಕೋಣೆಯ ಫ್ಯಾನ್‌ಗೆ ವಿದ್ಯಾರ್ಥಿನಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಅಂಕಗಳಿಕೆಯ ಒತ್ತಡ, ಪರೀಕ್ಷೆಯ ಭೀತಿಯಿಂದಾಗಿ ಇವರು ನೇಣಿಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.