ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿನ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಕಲಬುರಗಿ ಲೋಕಾಯುಕ್ತ ಅಧಿಕಾರಿ ಎಸ್ ಪಿ ಜಾನ್ ಆಂಟೋನಿ ದಿಢೀರನೆ ಭೇಟಿಯನ್ನ ನೀಡಿದ್ದಾರೆ ಪರಿಶೀಲನೆಯನ್ನ ನಡೆಸಿದ್ದಾರೆ.

ಸಮಯಕ್ಕೆ ಸರಿಯಾದ ಊಟ ನೀಡುತ್ತಿಲ್ಲ ಎಂದು ಲೋಕಾಯುಕ್ತ ಎಸ್ಪಿ ಎದುರಿಗೆ ವಿದ್ಯಾರ್ಥಿನಿಯರು ಗೋಳು ತೋಡಿಕೊಂಡಿದ್ದಾರೆ. ವಾರ್ಡನ್ ಸರಿಯಾದ ಸಮಯಕ್ಕೆ ಬರುವುದಿಲ್ಲ, ಸರಿಯಾಗಿ ಕೂಡ ಊಟ ನೀಡುತ್ತಿಲ್ಲ ಎಂದು ವಿದ್ಯಾರ್ಥಿನಿಯರು ಆರೋಪ ಮಾಡಿದ್ದಾರೆ. ಸಂಬಂಧಿಸಿದ ಅಧಿಕಾರಿಗೆ ಹಾಗೂ ಊಟ ನೀಡುವ ಟೆಂಡರ್ ಪಡೆದ ಗುತ್ತಿಗೆದಾರರಿಗೆ ಲೋಕಾಯುಕ್ತ ಎಸ್ಪಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಲೇಬರ್ ಸಿಗುತ್ತಿಲ್ಲ ಎಂದು ಸಬೂಬು ಹೇಳಲು ಮುಂದಾದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡು ಗುತ್ತಿಗೆದಾರರ ಟೆಂಡರ್ ರದ್ದುಗೊಳಿಸಲು ವಿಶ್ವವಿದ್ಯಾಲಯ ಕುಲಪತಿಗಳಿಗೆ ಸೂಚನೆ ನೀಡಿದ್ದಾರೆ. ಗುತ್ತಿಗೆ ಪಡೆದು ಸರಿಯಾಗಿ ಊಟ ನೀಡದ ಈ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಹಾಗೂ ಸರಿಯಾದ ಸಮಯಕ್ಕೆ ಊಟ ಮೂಲ ಸೌಕರ್ಯ ನೀಡುವಂತೆ ಸೂಚನೆಯನ್ನು ನೀಡಿದ್ದಾರೆ.


