ಕರ್ನಾಟಕ: ಕರ್ನಾಟಕದಲ್ಲಿ ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಆರಂಭದಲ್ಲಿ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿತ್ತು. ಇದೀಗ, ಕಾಂಗ್ರೆಸ್ ಪಕ್ಷಕ್ಕೂ ಬಂಡಾಯದ ಬಿಸಿ ತಟ್ಟಿದೆ. ಎರಡೂ ಪಕ್ಷಗಳಲ್ಲಿ ಅಸಮಾಧಾನಿತರನ್ನು ಸಮಾಧಾನಿಸುವ ಕಸರತ್ತು ಮುಂದುವರಿದಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗದೇ ಪಕ್ಷದ ನಾಯಕತ್ವದ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ಜೆಸಿ ಮಾಧುಸ್ವಾಮಿ, ಬಿಎಸ್ ಯಡಿಯೂರಪ್ಪ ಮತ್ತು ಸೋಮಣ್ಣ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ತುಮಕೂರು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಿರುವ ಮಾಧುಸ್ವಾಮಿ, ಪಕ್ಷದಲ್ಲಿನ ನನ್ನ ಅಸಮಾಧಾನ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದವರು ಕರೆದರೂ ಚುನಾವಣೆಯಲ್ಲಿ ಸ್ಪರ್ಧಿಸಲಾರೆ. ಬಿಜೆಪಿಯವರು ಕರೆದರೂ ಚುನಾವಣೆಗೆ ನಿಲ್ಲುವುದಿಲ್ಲ. ಯಾರೋ ನೋಡಿ ಬಂದ ಹೆಣ್ಣನ್ನು ನಾನು ಮದುವೆ ಆಗಲ್ಲ ಎಂದು ಖಡಕ್ ಮಾತುಗಳನ್ನಾಡಿದ್ದಾರೆ. ನನಗೆ ಅಸಮಾಧಾನ ಇರುವುದು ಯಡಿಯೂರಪ್ಪನವರ ಮೇಲೆ. ನೀವೆಲ್ಲ ಅದಕ್ಕೆ ಉತ್ತರ ಕೊಡಬೇಕಿಲ್ಲ. ಯಡಿಯೂರಪ್ಪನವರೇ ಉತ್ತರ ಕೊಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್‌ಗೆ ಹೇಳಿದ್ದಾಗಿ ತಿಳಿಸಿದ್ದಾರೆ.

ಆದಾಗ್ಯೂ, ಮಾಧುಸ್ವಾಮಿ ಜತೆ ಮಾತಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಮಧ್ಯೆ, ಮಾಜಿ ಸಚಿವ ರಮೇಶ್ ಕುಮಾರ್, ಸಚಿವ ಸುಧಾಕರ್, ಕೋಲಾರ ಶಾಸಕ ಕೊತ್ತನೂರು ಮಂಜುನಾಥ್ ಸೇರಿ ಹಲವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿ ಕೋಲಾರ ಟಿಕೆಟ್ ಬಗ್ಗೆ ಸಮಾಲೋಚಿಸಿದರು.

By admin

Leave a Reply

Your email address will not be published. Required fields are marked *

Verified by MonsterInsights