ಕೊಡಗು : ಸ್ನಾನಕ್ಕೆ ತೆರಳಿದ ಪ್ರದೀಪ್ ಎಂಬ 21 ವರ್ಷದ ಯುವಕ ಕಾವೇರಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಸಮೀಪದ ಬಾಳುಗೋಡಿನಲ್ಲಿ ನಡೆದಿದೆ.
ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದಾಗ ಈ ದುರ್ಘಟನೆ ನಡೆದಿದೆ. ಮೃತದೇಹ ಮೀನಿನ ಗಾಣ ಹಾಗೂ ಬಲೆಗಳಿಗೆ ಸಿಲುಕಿದಂತಹ ಸ್ಥಿತಿಯಲ್ಲಿ ಗೋಚರವಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಬೇಟಿ ನೀಡಿ ಪರಿಶೀಲನೆಯನ್ನ ನಡೆಸಿದ್ದಾರೆ.