ಕೊಪ್ಪಳ : ರಸ್ತೆ ಬದಿ ನಿಂತಿದ್ದ KKRTC ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿಯಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿದ್ಯಾನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಡಿಕ್ಕಿಯಾದ ರಭಸಕ್ಕೆ ಚುನಾವಣೆ ವೀಕ್ಷಕರ ಜೀಪ್ ಸಂಪೂರ್ಣ ಜಖಂ ಆಗಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಭಾರೀ ಅಪಘಾತ ಸಂಭವಿಸಿದೆ. ಚುನಾವಣೆ ವೀಕ್ಷಕರ ವಾಹನದ ಡ್ರೈವರ್ ಶಿವಾನಂದಗೆ ಗಂಭೀರಗಾಯಗಳಾಗಿದೆ. ಓರ್ವ ಪೇದೆಗೆ ಸಣ್ಣಪುಟ್ಟ ಗಾಯಗಳಾಗಿದ್ದೂ, ಗಾಯಾಳುಗಳನ್ನು ಗಂಗಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಾಹನವು ಮೀನುಗಾರಿಕೆ ಇಲಾಖೆಗೆ ಸೇರಿದ್ದೂ, ಘಟನೆ ಮಾಹಿತಿ ಪಡೆದು ಆಸ್ಪತ್ರೆಗೆ ಗಂಗಾವತಿ ತಹಶಿಲ್ದಾರ್ ಯು.ನಾಗರಾಜ್ ಧಾವಿಸಿ, ಗಾಯಾಳುಗಳ ಸೂಕ್ತ ಚಿಕಿತ್ಸೆಗೆ ಸೂಚಿಸಿದ್ರು. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.