Top Newsಸುದ್ದಿ

ಮಲಿವಾಲ್ ಪ್ರಕರಣ: ಬಿಭವ್ ಜಾಮೀನು ಅರ್ಜಿ ವಜಾ

ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಭವ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ವಜಾಗೊಳಿಸಿದೆ.

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸೋಮವಾರ ಸಂಜೆಯವರೆಗೆ ಕಾಯ್ದಿರಿಸಿತ್ತು.

ಮೇ 13 ರಂದು ಮುಖ್ಯಮಂತ್ರಿಯವರ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸದಸ್ಯೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕುಮಾರ್ ಅವರನ್ನು ಮೇ 24 ರಂದು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ವಾದಗಳನ್ನು ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿದ್ದಾರೆ.

Comments (0)

Your email address will not be published. Required fields are marked *

Back to top button