ಲೋಕಸಭೆ ಚುನಾವಣೆಯ ಬಿರುಸಿನ ಹೊತ್ತಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮವಾದ ಟ್ವಿಟರ್ನಲ್ಲಿ ಕನ್ನಡ ಭಾಷೆಯಲ್ಲಿ ಖಾತೆಯೊಂದನ್ನು ತೆರೆದಿದ್ದಾರೆ.
ನರೇಂದ್ರ ಮೋದಿ ‘ನಮೋ ಕನ್ನಡ’ ಎಂಬ ಹೆಸರಿನಲ್ಲಿ ಕನ್ನಡ ಖಾತೆ ತೆರೆದಿದ್ದೂ, ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ ಹಾಗೂ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಕನ್ನಡಿಗರನ್ನು ಸುಲಭ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ತಲುಪಲು ಮೋದಿಯವರು ಕನ್ನಡದಲ್ಲಿ ಟ್ವಿಟ್ಟರ್ ಖಾತೆ ತೆರೆದು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮೋದಿ ತೆರೆದಿರುವ ಟ್ವಿಟ್ಟರ್ ಖಾತೆಯಲ್ಲಿ ಮೋದಿ ಭಾಷಣದ ವಿಡಿಯೋ ತುಣುಕುಗಳನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋಗಳಿಗೆ ಮೋದಿ ಭಾಷಣದ ಕನ್ನಡಾನುವಾದದ ಹಿನ್ನೆಲೆ ಧ್ವನಿ ನೀಡಿರುವುದು ವಿಶೇಷ.
ಮೋದಿ ಕರ್ನಾಟಕದಲ್ಲಿ ಒಂದು ಸುತ್ತಿನ ಚುನಾವಣಾ ಪ್ರಚಾರ ನಡೆಸಿದ್ದು, ಮತ್ತೊಮ್ಮೆ ಏಪ್ರಿಲ್ 14 ರಂದು ರಾಜ್ಯಕ್ಕೆ ಮತ್ತೋಮ್ಮ್ ಭೇಟಿ ನೀಡಲಿದ್ದಾರೆ. ಏಪ್ರಿಲ್ 14ರ ಭಾನುವಾರ ಮಂಗಳೂರಿನಲ್ಲಿ ರೋಡ್ ಶೋದಲ್ಲಿ ಭಾಗವಹಿಸಲಿದ್ದು, ತದ ನಂತರ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ ಎನ್ನಲಾಗ್ತಾ ಇದೆ.
ಡಯಾನ ಹೆಚ್ ಆರ್