ಮೈಸೂರು: ‘ಬಿಜೆಪಿ – ಜೆಡಿಎಸ್ ಮೈತ್ರಿಗೂ ಪೆನ್ ಡ್ರೈವ್‌ಗೂ ಸಂಬಂಧ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಇನ್ನು ಈಗ ಇರ್ತಾನಾ? ಪೆನ್ ಡ್ರೈವ್ ಪ್ರಕರಣದಿಂದ ದೇವೇಗೌಡರ ಫ್ಯಾಮಿಲಿ ಗೆ ಸ್ವಲ್ಪ ಡ್ಯಾಮೆಜ್ ಆಗಿರೋದು ಸತ್ಯ. ಪ್ರಜ್ವಲ್ ಎಚ್.ಡಿ. ರೇವಣ್ಣನ ಸಂಪರ್ಕದಲ್ಲೂ ಇಲ್ಲ. ನಾನು ಈಗ ಏನಾದರೂ ವಿದೇಶಕ್ಕೆ ಹೋದರೆ, ಪ್ರಜ್ವಲ್ ರಕ್ಷಣೆಗೆ ಹೋಗಿದ್ದಾರೆ ಅಂತಾ ಇವರು ಸುದ್ದಿ ಹಬ್ಬಿಸಿ ಬಿಡುತ್ತಾರೆ. ಯಾವ ಗ್ರಹಚಾರ ನಮಗೆ’? ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದರು.


