ರಾಜಕೀಯರಾಜ್ಯಸುದ್ದಿ

ಮುನಿಸು ಮರೆತು ಶ್ರೀನಿವಾಸ ಪ್ರಸಾದ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಹಲವು ವರ್ಷಗಳಿಂದ ದೂರ ಉಳಿದಿದ್ದ ಹಳೆ ಸ್ನೇಹಿತರಾದ ಸಿಎಂ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ ಇಬ್ಬರು ಭೇಟಿಯಾಗಿ ರಾಜಕೀಯ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಉಭಯ ನಾಯಕರು ಭೇಟಿ ಮಾಡಿರುವುದು ರಾಜಕೀಯ ಪಡಸಾಲೆಯಲ್ಲಿ ಅನೇಕ ಚರ್ಚೆಗೆ ಗ್ರಾಸವಾಗಿದೆ‌.

ಮೈಸೂರಿನ ಜಯಲಕ್ಷ್ಮಿ ಪುರಂ ನಿವಾಸದಲ್ಲಿರುವ ಸಂಸದ ಶ್ರೀನಿವಾಸ ಪ್ರಸಾದ್ ಮನೆಗೆ ಸಿಎಂ‌ ಸಿದ್ದರಾಮಯ್ಯ ಭೇಟಿ ನೀಡಿದರು. ಶ್ರೀನಿವಾಸ್ ಪ್ರಸಾದ್ ಹಲವು ವರ್ಷಗಳಿಂದ ಸಿದ್ದರಾಮಯ್ಯರಿಂದ ದೂರ ಉಳಿದಿದ್ದರು. ಇದೀಗ ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

ಭೇಟಿ ವೇಳೆ ಸಿಎಂ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಆರೋಗ್ಯ ವಿಚಾರಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಉಭಯ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದೆ. ಶ್ರೀನಿವಾಸ್ ಪ್ರಸಾದ್ ಮನೆಗೆ ನಾನು ಹೋಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಒಂದು ವಾರದ ಹಿಂದೆ ಹೇಳಿದ್ದರು.

ಈಗ ಸಿಎಂ ಸಿದ್ದರಾಮಯ್ಯ ಒಂದೇ ವಾರದಲ್ಲಿ ನಿಲುವು ಬದಲಾಯಿಸಿಕೊಂಡಿದ್ದಾರೆ. ಶ್ರೀನಿವಾಸ್ ಪ್ರಸಾದ್ ಮನೆಗೆ ಹೋಗದಿದ್ದರೆ ದುಬಾರಿ ಬೆಲೆ ತೆತ್ತಬೇಕಾಗುತ್ತೆ ಎಂಬ ಸುಳಿವು ಸಿಕ್ಕಿದ್ದೇ ತಡ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕರಾಗಿರುವ ಶ್ರೀನಿವಾಸ ಪ್ರಸಾದ್ ರನ್ನ ಭೇಟಿ ಮಾಡಿದ್ದು, ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವಂತೆ ಸಿಎಂ ಮನವಿ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button