ನವದೆಹಲಿ : ದೂರದರ್ಶನ’ದಲ್ಲಿ ಪ್ರಸಾರವಾದ ‘ರಾಮಾಯಣ’ ಧಾರಾವಾಹಿಯ ನಟ ಅರುಣ್ ಗೋವಿಲ್ ಅವರಿಗೆ ಭಾರತೀಯ ಜನತಾ ಪಾರ್ಟಿಯಿಂದ ಟಿಕೆಟ್ ನೀಡಲಾಗಿದೆ.
ಅರುಣ್ ಗೋವಿಲ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರು ಮೂಲತಃ ಉತ್ತರ ಪ್ರದೇಶದ ಮೀರತ್ನವರು.
ಚುನಾವಣೆಯಲ್ಲಿ ಅವರು ಉತ್ತರ ಪ್ರದೇಶದ ಮೀರತ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇಂದು (ಮಾರ್ಚ್ 24) ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಆಗಿದ್ದು 111 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.
ಇತ್ತೀಚೆಗೆ ಬಿಡುಗಡೆ ಆದ ‘ಆರ್ಟಿಕಲ್ 370’ ಸಿನಿಮಾದಲ್ಲಿ ಅರುಣ್ ಗೋವಿಲ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವನ್ನು ನಿಭಾಯಿಸಿದ್ದಾರೆ.


