ಬೆಂಗಳೂರು : ಇದೇ 20ರಂದು ಸಂಜೆ ಅರಮನೆ ಮೈದಾನಕ್ಕೆ ಆದರಣೀಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಆಗಮಿಸಲಿದ್ದು, ನಮ್ಮೆಲ್ಲರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

ಅರಮನೆ ಮೈದಾನದ ಗಾಯತ್ರಿ ವಿಹಾರ ಗೇಟ್ ನಂ.1ರಲ್ಲಿ ನಡೆಯುವ ಪ್ರಧಾನಮಂತ್ರಿಗಳ ಬೆಂಗಳೂರು ಸಮಾವೇಶದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗಹಿಸಿದ್ದರು. ಬೆಂಗಳೂರು ದಕ್ಷಿಣ, ಬೆಂಗಳೂರು ಮಧ್ಯ, ಬೆಂಗಳೂರು ಉತ್ತರ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರದ ಭಾಗದ ಜನರು, ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಮೋದಿಯವರನ್ನು ನೋಡಲು ಜನರು, ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ಪದೇಪದೇ ಬೆಂಗಳೂರಿಗೆ ಬರಬೇಕೆಂಬ ಉತ್ಸಾಹ ಪ್ರಧಾನಿಯವರಲ್ಲೂ ಇದೆ ಎಂದರಲ್ಲದೆ, ಪ್ರಧಾನಿಯವರ ಕಾರ್ಯಕ್ರಮಕ್ಕೆ 4 ಕ್ಷೇತ್ರಗಳಿಂದ ಸುಮಾರು 2 ಲಕ್ಷ ಸೇರುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ನಾವು ರಚಿಸಿದ ಬಿಜೆಪಿಯ ಪ್ರತಿ ಬೂತ್ ಸಮಿತಿಯಲ್ಲಿ 10-15 ಕಾರ್ಯಕರ್ತರಿದ್ದಾರೆ. ಅವರೆಲ್ಲರೂ ಈ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನಿಸಿದರು. ವಾರ್ಡ್, ಮಂಡಲ, ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಬೇಕು. 32 ವಿಧಾನಸಭಾ ಕ್ಷೇತ್ರಗಳಿಂದ ದೊಡ್ಡ ಸಂಖ್ಯೆಯ ಕಾರ್ಯಕರ್ತರ ತಂಡ ಬರಬೇಕೆಂದು ವಿನಂತಿಸಿದರು. 20ರಂದು ಮೋದಿಯವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು ಎಂದು ವಿವರ ನೀಡಿದರು.

ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

By Veeresh

Leave a Reply

Your email address will not be published. Required fields are marked *

Verified by MonsterInsights