Wednesday, April 30, 2025
35.6 C
Bengaluru
LIVE
ಮನೆರಾಜಕೀಯಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ತಂದೆ-ತಾಯಿ ಬಳಿ ಕ್ಷಮೆಯಾಚನೆ

ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ತಂದೆ-ತಾಯಿ ಬಳಿ ಕ್ಷಮೆಯಾಚನೆ

ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ವಿಡಿಯೋದಲ್ಲಿ ತಂದೆ- ತಾಯಿ, ತಾತನ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾರೆ. ಇನ್ನು ವಿದೇಶಕ್ಕೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.

ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು. ವಿದೇಶಕ್ಕೆ ಹೋದ ಮೂರ್ನಾಲ್ಕು ದಿನದ ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಾಗಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯಿತು. ಆಗ ಕೇಸ್​ ದಾಖಲಾಗಿರಲಿಲ್ಲ. ಎಸ್​​ಐಟಿ ಕೂಡ ರಚನೆ ಆಗಿರಲಿಲ್ಲ. ಆ ನಂತರ ಎಸ್​​ಐಟಿ ನೋಟಿಸ್​ ನೀಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಆದ್ರೆ, ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು-ಪ್ರಜ್ವಲ್ ರೇವಣ್ಣ ಎಂದು ವಿದೇಶದಿಂದ ವಿಡಿಯೋ ರಿಲೀಸ್ ಮಾಡಿದ್ದಾರೆ.

ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ ಎಂದಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments