ಬೆಂಗಳೂರು : ಮಂಡ್ಯ ಸಂಸದೆ ಸುಮಲತ ಭೇಟಿಯಾಗಿ ಸೌಹಾರ್ಧ ಮಾತುಕತೆ ನಡೆಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಬೆಂಬಲಿಸುವಂತೆ ಇಂದು ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಸುಮಲತಾ ಅವರನ್ನು ಭೇಟಿಯಾಗಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅವರು ಪಕ್ಷೇತರ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು.
ಈ ವೇಳೆ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವೆ ಮಾತಿನ ಸಮರ ನಡೆದಿತ್ತು. ಇದೀಗ ಬದಲಾದ ರಾಜಕೀಯದಲ್ಲಿ ಸುಮಲತಾ ಅವರು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುವಂತೆ ಇಂದು ಕುಮಾರಸ್ವಾಮಿ ಅವರು ಸುಮಲತಾ ಅವರ ಬೆಂಗಳೂರು ನಿವಾಸಕ್ಕೆ ಮಧ್ಯಾಹ್ನ 3 ಗಂಟೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇಂದು ಅವರ ಭೇಟಿಯು ಅತ್ಯಂತ ಕುತೂಹಲ ಮೂಡಿಸುವಂತಹದಾಗಿತ್ತು.