ತುಮಕೂರು : ಲೋಕಸಭಾ ಚುನಾವಣೆ ಎನ್ಡಿಎ ಅಭ್ಯರ್ಥಿಯಾಗಿರುವ ವಿ. ಸೋಮಣ್ಣ ಬೃಹತ್ ರ್ಯಾಲಿ ಮೂಲಕ ತುಮಕೂರಿನಲ್ಲಿ ಇಂದು ಶಕ್ತಿಪ್ರದರ್ಶನ ನಡೆಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ತುಮಕೂರಿನ ವಿನಾಯಕ ನಗರದ ಗಣಪತಿ ಮತ್ತು ಅರ್ಧನಾರೀಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಗಣಪತಿ ದೇವಸ್ಥಾನದಿಂದ ಟೌನ್ ಹಾಲ್ ಸರ್ಕಲ್, ಅಶೋಕ ರಸ್ತೆ ಮುಖಾಂತರ ಡಿಸಿ ಕಚೇರಿವರೆಗೆ ಬೃಹತ್ ರ್ಯಾಲಿಯನ್ನೂ ಸಹ ನಡೆಸಲಿದ್ದಾರೆ. ಮಧ್ಯಾಹ್ನ 1:30 ಕ್ಕೆ ವಿ. ಸೋಮಣ್ಣ ನಾಮಪತ್ರ ಸಲ್ಲಿಸಲಿದ್ದಾರೆ.
ರ್ಯಾಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಗೋಪಾಲಯ್ಯ, ಬಿಸಿ ನಾಗೇಶ್, ಸಂಸದ ಜಿ.ಎಸ್ ಬಸವರಾಜು, ಶಾಸಕ ಸುರೇಶ್ ಗೌಡ, ಜಿ.ಬಿ ಜ್ಯೋತಿಗಣೇಶ್, ಸುರೇಶ್ ಬಾಬು, ಎಂ.ಟಿ ಕೃಷ್ಣಪ್ಪ, ಮಾಜಿ ಶಾಸಕ ಮಸಾಲೆ ಜಯರಾಮ್, ಸುಧಾಕರ್ ಲಾಲ್, ವೀರಭದ್ರಯ್ಯ, ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ಇಂದು ನಡೆಯುವ ಶಕ್ತಿಪ್ರದರ್ಶನ ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ.