ರಾಜ್ಯಸುದ್ದಿ

ವಿದ್ಯುತ್ ತಂತಿ ತಗುಲಿ ರೈತ ಸಾವು

ಯಾದಗಿರಿ : ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿರುವಂತಹ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿ ನಡೆದಿದೆ.

ಹೊರಟೂರು ಗ್ರಾಮದ ಮರೇಪ್ಪ (43) ಎಂಬ ರೈತ ಜಾನುವಾರುಗಳಿಗೆ ಮೇವು ತೆಗೆದುಕೊಂಡು ಹೋಗಲು
ಜಮೀನಿಗೆ ಹೋದಾಗ ಈ ಅವಘಡ ನಡೆದಿದೆ. ಈ ವೇಳೆ ವಿದ್ಯುತ್ ತಂತಿ ತಗುಲಿ ರೈತ ಮರೇಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿ ಮೃತ ರೈತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ವೈಯಕ್ತಿಕ ಆರ್ಥಿಕ ಸಹಾಯ ಮಾಡಿದ್ದಾರೆ. ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments (0)

Your email address will not be published. Required fields are marked *

Back to top button