ಕ್ರೈಂ ಸ್ಟೋರಿರಾಜ್ಯಸುದ್ದಿ

ಹಣಕಾಸಿನ ಜಗಳ‌ ಓರ್ವನ ಕೊಲೆಯಲ್ಲಿ‌ ಅಂತ್ಯ; ಹುಬ್ಬಳ್ಳಿ ವರೂರಿನ ಜಗದೀಶ ದಾಬಾಗೆ ಎಸ್ಪಿ ಭೇಟಿ.

ಹುಬ್ಬಳ್ಳಿ : ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಬ್ಬಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜಗದೀಶ ದಾಬಾ ಬಳಿ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ವರೂರಿನ ಜಗದೀಶ ದಾಬಾ ಬಳಿ ಘಟನೆ ನಡೆದಿದ್ದು, ಮೂವತೈದು ವರ್ಷದ ಸುಧೀರ ಹುಲಗುರ ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ‌ಕೊಲೆ ಮಾಡಿದ ನಂತರ ಸಾಗರ ಹತ್ಯೆಯ ಆರೋಪಿ ಪರಾರಿಯಾಗಲು ಯತ್ನಿಸುತ್ತಿದನ್ನು ಗಮನಿಸಿದ ಸಾರ್ವಜನಿಕರು,ಆತನನ್ನು ಹಿಡಿದು ಹಿಗ್ಗಮುಗ್ಗಾ ಥಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅರೋಪಿ ಸಾಗರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ವ್ಯಕ್ತಿಗಳು ವರೂರು ಗ್ರಾಮದವರೆಂದು ಹೇಳಲಾಗುತ್ತಿದೆ. ಸ್ಥಳೀಯರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಭೇಟಿ ನೀಡಿ, ಠಾಣಾ ಅಧಿಕಾರಿಗಳಿಂದ ತನಿಖೆಯ ಮಾಹಿತಿ ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button