Tuesday, June 24, 2025
26.4 C
Bengaluru
Google search engine
LIVE
ಮನೆರಾಜಕೀಯಲೋಕ ಸಮರಕ್ಕೆ ಮುಹೂರ್ತ ಫಿಕ್ಸ್: ರಾಜ್ಯದಲ್ಲಿ 2 ಹಂತದಲ್ಲಿ ಮತದಾನ

ಲೋಕ ಸಮರಕ್ಕೆ ಮುಹೂರ್ತ ಫಿಕ್ಸ್: ರಾಜ್ಯದಲ್ಲಿ 2 ಹಂತದಲ್ಲಿ ಮತದಾನ

ಪ್ರಜಾಪ್ರಭುತ್ವದ ಹಬ್ಬಕ್ಕೆ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಿದೆ. ಈ ಮೂಲಕ ಇಂದಿನಿಂದ ಲೋಕಸಭೆ ಚುನಾವಣೆಯ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ಸಿಕ್ಕಂತಾಗಿದೆ.  ಮೊದಲ ಹಂತದ ಮತದಾನ ಏಪ್ರಿಲ್ 26ನೇ ತಾರೀಕು ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇನ್ನೂ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ. ಅಲ್ಲದೇ ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ದೇಶದ ಆಡಳಿತದ ಚುಕ್ಕಾಣಿ ಯಾರು ಹಿಡಿಯುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ. ಆಡಳಿತರೂಢ ಐಎನ್​ಡಿಎ ಒಕ್ಕೂಟ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಆಗಿದೆ. ಇತ್ತ ವಿರೋಧ ಪಕ್ಷಗಳ ಒಕ್ಕೂಟ, INDIA ಕೂಡ ದೇಶದಲ್ಲಿ ಮತ್ತೆ ಆಡಳಿತ ನಡೆಸುವ ಕನಸು ಕಾಣುತ್ತಿದೆ. ಪ್ರತಿಷ್ಠೆ ಮತ್ತು ಜಿದ್ದಾಜಿದ್ದಿನ ಈ ಹೋರಾಟಕ್ಕೆ ಇಂದು ಚುನಾವಣಾ ಆಯೋಗ ದಿನವನ್ನು ಗೊತ್ತು ಮಾಡಿದೆ.

ಬಹುನಿರೀಕ್ಷಿತ 2024ರ ಲೋಕಸಭಾ ಚುನಾವಣೆ ಸಂಬಂಧ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತಾಡಿದ್ರು. ಈ ವೇಳೆ ಹಿರಿಯ ಮತದಾರರು ಮನೆಯಲ್ಲೇ ಕೂತು ವೋಟ್ ಚಲಾವಣೆ ಮಾಡಬಹುದು ಎಂದಿದ್ದಾರೆ. ಇನ್ನು, ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ಜಗತ್ತಿನ ಅತೀ ದೊಡ್ಡ ಮತದಾನಕ್ಕೆ ಭಾರತ ಸಿದ್ಧವಾಗಿದೆ.

ಈ ಬಾರಿ 97 ಕೋಟಿಗೂ ಹೆಚ್ಚು ಜನ ಮತದಾನ ಮಾಡಲಿದ್ದಾರೆ. ಸುಮಾರು 11 ಲಕ್ಷ ಆಸುಪಾಸು ಮತಗಟ್ಟೆಗಳಲ್ಲಿ ವೋಟಿಂಗ್ ಆಗಲಿದೆ. 1.5 ಕೋಟಿ ಸಿಬ್ಬಂದಿ ಮತಗಟ್ಟೆ ನಿರ್ವಹಣೆ ಮಾಡಲಿದ್ದಾರೆ. ಈ ಬಾರಿ 49.7 ಕೋಟಿ ಪುರುಷ ಮತದಾರರು, 47.1 ಕೋಟಿ ಮಹಿಳಾ ಮತದಾರರು ಇದ್ದಾರೆ. 19 ಕೋಟಿಗೂ ಹೆಚ್ಚು ಯುವ ಮತದಾರರು ಇದ್ದು, 1.8 ಕೋಟಿ ಮತದಾರರು ಮೊದಲ ಬಾರಿಗೆ ವೋಟ್ ಮಾಡಲಿದ್ದಾರೆ.

ಅದರಲ್ಲೂ 48 ಸಾವಿರ ಮಂಗಳ ಮುಖಿ ವೋಟರ್ಸ್, 82 ಲಕ್ಷ 85 ವರ್ಷಕ್ಕೂ ಹೆಚ್ಚು ಮೇಲ್ಪಟ್ಟ ಮತದಾರರು, 2.18 ಲಕ್ಷ 100 ವರ್ಷ ಪೂರೈಸಿದವರು, 89 ಲಕ್ಷ ವಿಶೇಷ ಚೇತನ ಮತದಾರರು ಇದ್ದಾರೆ. ವಯಸ್ಸಾಗಿರೋರು ಮತ್ತು ವಿಶೇಷ ಚೇತನರು ಮನೆಯಲ್ಲೇ ಕೂತು ವೋಟ್ ಮಾಡಬಹುದು ಅಂತ ಹೇಳಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments