ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ‘ಕಾಂತಾರ’ ಚಾಪ್ಟರ್-1 ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇತ್ತೀಚೆಗೆ 41ನೇ ವರ್ಷದ ಹುಟ್ಟುಹಬ್ಬವನ್ನು ಪತ್ನಿ ಪ್ರಗತಿ ಜೊತೆ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಬರ್ತ್‌ಡೇಯ ಸುಂದರ ಫೋಟೋಗಳನ್ನು ಇದೀಗ ಸೋಷಿಯಲ್ ಮೀಡಿಯಾದಲ್ಲಿ ರಿಷಬ್ ಹಂಚಿಕೊಂಡಿದ್ದಾರೆ.
ಜು.7ರಂದು ರಿಷಬ್ ಶೆಟ್ಟಿ ಹುಟ್ಟುಹಬ್ಬವಾಗಿದ್ದು, ಖಾಸಗಿ ಹೋಟೆಲ್‌ವೊಂದರಲ್ಲಿ ಅದ್ಧೂರಿಯಾಗಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ತಡವಾಗಿ ನಟ ಹುಟ್ಟುಹಬ್ಬದ ಫೋಟೋ ಶೇರ್ ಮಾಡಿದ್ದಾರೆ.
ಅಂದಹಾಗೆ, ಪತಿ ಹುಟ್ಟುಹಬ್ಬದಂದು ಪ್ರೀತಿಯಿಂದ ಪತ್ನಿ ಪ್ರಗತಿ ವಿಶೇಷವಾಗಿ ಶುಭಕೋರಿದ್ದರು. ನನ್ನ ಜೀವನದ ಆಧಾರಸ್ತಂಭಕ್ಕೆ ಜನ್ಮದಿನದ ಶುಭಾಶಯಗಳು. ನೀವು ಎಂತಹ ಅದ್ಭುತ ವ್ಯಕ್ತಿ ಎಂದು ನಾನು ಜಗತ್ತಿಗೆ ಹೇಳಲು ಬಯಸುತ್ತೇನೆ. ನಿಮ್ಮನ್ನು ನಿಜವಾಗಿಯೂ ತಿಳಿದಿರುವವರು ಅದೃಷ್ಟವಂತರು. ನಿಮ್ಮ ಶಕ್ತಿ, ಬುದ್ಧಿವಂತಿಕೆ ಮತ್ತು ಪ್ರೀತಿ ಪ್ರತಿದಿನ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ ಎಂದು ಪ್ರಗತಿ ಶೆಟ್ಟಿ ಬಣ್ಣಿಸಿದ್ದಾರೆ. ನಾವು ಒಟ್ಟಿಗೆ ಇರುವುದಕ್ಕಾಗಿ ನಾನು ಪ್ರತಿದಿನ ದೇವರಿಗೆ ಕೃತಜ್ಞನಾಗಿದ್ದೇನೆ. ನಿಮಗೆ ಸಂತೋಷ, ಯಶಸ್ಸು ಮತ್ತು ಪ್ರಪಂಚದ ಎಲ್ಲಾ ಸಂತೋಷದಿಂದ ತುಂಬಿದ ವರ್ಷವಾಗಲಿ ಎಂದು ಹಾರೈಸಿದ್ದರು. ಈ ಪೋಸ್ಟ್ ನೋಡಿದ ಫ್ಯಾನ್ಸ್, ಜೋಡಿ ಅಂದರೆ ಹೀಗಿರಬೇಕು ಎಂದು ಮೆಚ್ಚುಗೆ ಸೂಚಿಸಿದ್ದರು.
ಇನ್ನೂ ಪ್ರಗತಿ ಶೆಟ್ಟಿ ಮತ್ತು ರಿಷಬ್ ಪ್ರೀತಿಸಿ ಗುರುಹಿರಿಯರ ಒಪ್ಪಿಗೆ ಪಡೆದು 2017ರ ಫೆ.9ರಂದು ಕುಂದಾಪುರದಲ್ಲಿ ಮದುವೆಯಾದರು. ಪತಿ ರಿಷಬ್ ಯಶಸ್ಸಿಗೆ ಪ್ರಗತಿ ಶಕ್ತಿಯಾಗಿ ನಿಂತರು. ಅವರ ಕೆಲಸಗಳಿಗೆ ಸಾಥ್ ನೀಡುತ್ತಲೇ ಬಂದಿದ್ದಾರೆ.
ರಿಕ್ಕಿ, ಕಿರಿಕ್ ಪಾರ್ಟಿ, ಸೇರಿದಂತೆ ಹಲವು ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ‘ಬೆಲ್ ಬಾಟಂ’ ಚಿತ್ರದ ನಾಯಕ ನಟನಾಗಿ ಗೆದ್ದು ಬೀಗಿದ್ದರು. ಆದರೆ ‘ಕಾಂತಾರ’ (Kantara) ಸಿನಿಮಾದಲ್ಲಿ ನಟಸಿ, ನಿರ್ದೇಶನ ಮಾಡಿ ಸೆನ್ಸೇಷನ್ ಕ್ರಿಯೆಟ್ ಮಾಡಿದರು. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ರಿಷಬ್ ಗುರುತಿಸಿಕೊಂಡರು. ಇದೀಗ ‘ಕಾಂತಾರ’ ಪ್ರೀಕ್ವೆಲ್ ಸಿನಿಮಾ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com