Thursday, November 20, 2025
19.1 C
Bengaluru
Google search engine
LIVE
ಮನೆ#Exclusive NewsTop NewsKargil Vijay Diwas: ದೇಶಕ್ಕಾಗಿ ಬಲಿದಾನಗೈದ ಯೋಧರಿಗೆ ಪ್ರಧಾನಿ ಮೋದಿ ನಮನ

Kargil Vijay Diwas: ದೇಶಕ್ಕಾಗಿ ಬಲಿದಾನಗೈದ ಯೋಧರಿಗೆ ಪ್ರಧಾನಿ ಮೋದಿ ನಮನ

ನವದೆಹಲಿ: ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು.

ಕಾರ್ಗಿಲ್‌ ವಿಜಯ ದಿವಸ್‌ನ 25ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಲಡಾಖ್‌ನಲ್ಲಿರುವ ಡ್ರಾಸ್‌ಗೆ ಪ್ರಧಾನಿ ತೆರಳಿದ್ದರು. ಪ್ರಧಾನಿ ಭೇಟಿಗೆ ಮುನ್ನ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಭದ್ರತಾ ಉದ್ದೇಶಗಳಿಗೆ ಅನುಗುಣವಾಗಿ ವ್ಯವಸ್ಥೆಗಳನ್ನು ಮಾಡಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಯಕರು ಸಹ ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಕಾರ್ಗಿಲ್ ಯುದ್ಧವು 25 ವರ್ಷಗಳ ಹಿಂದೆ ಅಂದರೆ 1999 ರ ಜುಲೈ 26 ರಂದು ಅಧಿಕೃತವಾಗಿ ಕೊನೆಗೊಂಡಿತ್ತು. ಈ ದಿನವನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ಲಡಾಖ್‌ನ ಕಾರ್ಗಿಲ್ ಜಿಲ್ಲೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯವನ್ನು ಈ ದಿನ ಸ್ಮರಿಸಲಾಗುತ್ತದೆ. ದೇಶಕ್ಕಾಗಿ ಯೋಧರ ಬಲಿದಾನವನ್ನು ನೆನಪಿಸಿಕೊಳ್ಳಲಾಗುತ್ತದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments