Thursday, November 20, 2025
19.1 C
Bengaluru
Google search engine
LIVE
ಮನೆ#Exclusive Newsಕೇರಳದಲ್ಲಿ ಮೃತಪಟ್ಟ ಕನ್ನಡಿಗರಿಗೆ 5 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇರಳದಲ್ಲಿ ಮೃತಪಟ್ಟ ಕನ್ನಡಿಗರಿಗೆ 5 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ,ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ.

ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ. ಎಂದು ಮುಖ್ಯಮಂತ್ರಿ ಸಾಮಾಜಿಕ ಜಾಲತಾಣ X ಮೂಲಕ ತಿಳಿಸಿದ್ದಾರೆ

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments