Top Newsರಾಜ್ಯಸುದ್ದಿ

ಮೀನು ಕೃಷಿಕರಿಗೆ 10 ಲಕ್ಷ ಪರಿಹಾರ ಘೋಷಣೆ :ಡಿ.ಕೆ. ಶಿವಕುಮಾರ್

ಮುರುಡೇಶ್ವರ:  ಮೀನುಗಾರರಿಗೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಹಾನಿಯಾದರೆ ಪರಿಹಾರವಾಗಿ ₹6 ಲಕ್ಷ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು ₹8 ಲಕ್ಷಕ್ಕೆ ಏರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ₹10 ಲಕ್ಷಕ್ಕೆ ಏರಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಣೆ ಮಾಡಿದರು.ಮುರುಡೇಶ್ವರದಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ವರ್ಷ ಮೀನುಗಾರರಿಗಾಗಿ 10 ಸಾವಿರ ಮನೆಗಳನ್ನು ನೀಡಲು ತೀರ್ಮಾನ ಮಾಡಿದ್ದೇವೆ. ಮಂಗಳೂರಿನಲ್ಲಿ ₹49 ಕೋಟಿ ವೆಚ್ಚದಲ್ಲಿ ಮೀನುಗಾರಿಕೆ ಬಂದರು ಕಾಮಗಾರಿ ಪೂರ್ಣಗೊಂಡಿದೆ.ಸಮೀಕ್ಷೆ ಪ್ರಕಾರ 99% ಮೀನುಗಾರರು ಆರ್ಥಿಕವಾಗಿ ಹಿಂದುಳಿದಿದ್ದು, ಈ ಮೀನುಗಾರರ ರಕ್ಷಣೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಮೀನು ಮಾರಾಟ ಮಾಡಲು ತ್ರಿಚಕ್ರ ಎಲೆಕ್ಟ್ರಿಕ್ ವಾಹನ ಹಂಚಲಾಗಿದೆ” ಎಂದು ತಿಳಿಸಿದರು.

ಕರಾವಳಿ ಭಾಗದಲ್ಲಿ ಉತ್ತಮ ಪರಿಸರ, ಸಮುದ್ರ, ಕೌಶಲ್ಯಯುತ ಮಾನವ ಸಂಪನ್ಮೂಲವಿದ್ದು, ಈ ಭಾಗದ ಜನ ಉದ್ಯೋಗ ಅರಸಿ ಬೇರೆ ಕಡೆ ವಲಸೆ ಹೋಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮೀನುಗಾರರು ಸೇರಿದಂತೆ ಕರಾವಳಿ ಭಾಗದ ಎಲ್ಲಾ ವರ್ಗದವರು ಉದ್ಯೋಗ ಹುಡುಕಿಕೊಂಡು ಬೇರೆ ರಾಜ್ಯ ಹಾಗೂ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.

ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದ ಬಡ, ಮಧ್ಯಮ ವರ್ಗದ ಜನರ ಸಂಕಷ್ಟಕ್ಕೆ ಸ್ಪಂದಿಸಲು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಬಿಜೆಪಿ ಸ್ನೇಹಿತರು ಈ ಯೋಜನೆ ಬಗ್ಗೆ ಟೀಕೆ, ಅಪಪ್ರಚಾರ ಮಾಡುತ್ತಿದ್ದಾರೆ. ಆದರೂ ಮಧ್ಯಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ನಮ್ಮ ಮಾದರಿಯಲ್ಲಿ ಬಿಜೆಪಿ ಸರ್ಕಾರಗಳು ಯೋಜನೆ ರೂಪಿಸುತ್ತಿವೆ. ಆಮೂಲಕ ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದಾರೆ ಎಂದು ಬಿಜೆಪಿಯವರಿಗೂ ಅರ್ಥವಾಗಿದೆ. ನಮ್ಮ ಸರ್ಕಾರ 2 ಸಾವಿರ, ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, 10 ಕೆ.ಜಿ ಅಕ್ಕಿ, ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುತ್ತಿದೆ. ಎಲ್ಲಾ ಪಕ್ಷದವರಿಗೂ ಈ ಯೋಜನೆ ಜಾರಿ ಮಾಡಿದ್ದೇವೆ. ಇದಕ್ಕಾಗಿ ₹56 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ. ಇದರಿಂದ ಬಡ ಕುಟುಂಬಕ್ಕೆ ವಾರ್ಷಿಕವಾಗಿ ಸರಾಸರಿ 50 ಸಾವಿರದಷ್ಟು ಉಳಿತಾಯ ಮಾಡಲು ಮುಂದಾಗಿದೆ. ಆಮೂಲಕ ದೇಶಕ್ಕೆ ಕರ್ನಾಟಕ ಮಾದರಿ ಪರಿಚಯಿಸಿದ್ದೇವೆ.

Comments (0)

Your email address will not be published. Required fields are marked *

Back to top button