Tuesday, January 27, 2026
26.9 C
Bengaluru
Google search engine
LIVE
ಮನೆ#Exclusive NewsTop Newsಭಾರತ ವಿಶ್ವದ 5ನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದೆ :ಹೆಚ್‌ಡಿ ಕುಮಾರಸ್ವಾಮಿ

ಭಾರತ ವಿಶ್ವದ 5ನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದೆ :ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು  ಹೇಳಿದರು.ರಾಷ್ಟ್ರ ನಿರ್ಮಾಣದಲ್ಲಿ ಉಕ್ಕಿನ ಉದ್ಯಮದ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ.

ಭಾರತೀಯ ಲೋಹ ಸಂಸ್ಥೆ (ಐಐಎಂ) ಹಮ್ಮಿಕೊಂಡಿದ್ದ ‘ಲೋಹಶಾಸ್ತ್ರಜ್ಞ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣದಲ್ಲಿ ಉಕ್ಕಿನ ಉದ್ಯಮದ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಶ್ರಮಿಸಲಾಗುತ್ತಿದೆ. ಈ ರೂಪಾಂತರಕ್ಕೆ ಉಕ್ಕು ಪ್ರಮುಖ ಕೇಂದ್ರವಾಗಿ ಉಳಿದಿದ್ದು, ಜಾಗತಿಕ ವೇದಿಕೆಯಲ್ಲಿ ದೇಶದ ಸ್ಥಿತಿಸ್ಥಾಪಕತ್ವವನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿದರು.

ಜಾಗತಿಕ ಪರಿಸರ ಸಮತೋಲನದ ಉದ್ದೇಶದ ಹಿನ್ನೆಲೆಯಲ್ಲಿ ಉಕ್ಕಿನ ಸುಸ್ಥಿರ ಉತ್ಪಾದನೆಗೆ ಹೈಡ್ರೋಜನ್ ಆಧಾರಿತ ಉಕ್ಕು ತಯಾರಿಕೆ ಮತ್ತು ಉಕ್ಕಿನ ಮರು ಬಳಕೆಯನ್ನು ಉತ್ತೇಜಿಸಲಾಗುತ್ತಿದೆ ಎಂದು ಹೇಳಿದರು. ವಿಶೇಷ ಉಕ್ಕು, ಹಸಿರು ಉಕ್ಕು ತಯಾರಿಕೆಗೆ ಆದ್ಯತೆ ನೀಡಲಾಗಿದೆ. ಉಕ್ಕಿನ ಸುಸ್ಥಿರ ಉತ್ಪಾದನೆಗೆ ಜಲಜನಕ ಆಧಾರಿತ ಉಕ್ಕು ತಯಾರಿಕೆ ಮತ್ತು ಮರು ಬಳಕೆಯನ್ನು ಉತ್ತೇಜಿಸಲಾಗುತ್ತಿದೆ. ಉತ್ಪಾದನಾ ಸಂಪರ್ಕ ಉಪಕ್ರಮ ಸೇರಿದಂತೆ ಹಲವಾರು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಜಾರಿಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಭಾರತ ಜಗತ್ತಿನ ಐದನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದೆ. ಈ ಪ್ರಯತ್ನಕ್ಕೆ ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಉಕ್ಕು ಕ್ಷೇತ್ರದಲ್ಲಿ ಸುಸ್ಥಿರ ಮತ್ತು ಚಲನಶೀಲ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಅದಕ್ಕೆ ಪೂರಕವಾಗಿ ನಿರ್ದಿಷ್ಟ ಕಾರ್ಯಸೂಚಿಗಳನ್ನು ರೂಪಿಸಲಾಗಿದೆ. ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯ ನೀಡುವುದರ ಜತೆಗೆ, ಉಕ್ಕು ಉತ್ಪಾದನೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ವಾಯುಮಾಲಿನ್ಯವನ್ನು ಶೂನ್ಯ ಮಟ್ಟಕ್ಕೆ ತರುವ ಗುರಿ ಹೊಂದಲಾಗಿದೆ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments