Wednesday, April 30, 2025
24 C
Bengaluru
LIVE
ಮನೆ#Exclusive NewsTop Newsಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಶರಣಪ್ರಕಾಶ್ ಪಾಟೀಲ್

ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಲಿದ್ದು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಹೇಳಿದರು.ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಕಲ್ಯಾಣ ಕರ್ನಾಟಕದ ಸಂಡೂರು, ಕಿತ್ತೂರು ಕರ್ನಾಟಕದ ಶಿಗ್ಗಾಂವಿ ಮತ್ತು ಮೈಸೂರು ಭಾಗದ ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿರುವುದರಿಂದ  ಸುಳ್ಳು ಎಂದು ಸಾಬೀತಾಗಿದೆ.

ಇದೇ ವೇಳೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಿಡಿಕಾರಿದ ಅವರು, ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು ಮತ್ತು ವಕ್ಫ್ ಆಸ್ತಿ ವಿಚಾರದಲ್ಲಿ ಸಾರ್ವಜನಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದರು. ಆದರೆ, ಜನರು ತಕ್ಕ ಉತ್ತರ ನೀಡಿದ್ದಾರೆ. ಇದು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಮುಜುಗರವನ್ನು ತಂದಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದಾದ್ಯಂತ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದೆ. ಒಂದೂವರೆ ವರ್ಷದೊಳಗೆ ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ವರ್ಗದ ಜನರನ್ನು ತಲುಪುವಂತೆ ಮಾಡಿದೆ. ಇದರ ಫಲಿತಾಂಶ ಉಪಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ. ಬಿಜೆಪಿ-ಜೆಡಿಎಸ್ ನಾಯಕರು ಜನರನ್ನು ವಂಚಿಸಲು ಹಲವು ತಿಂಗಳುಗಳಿಂದ ಸುಳ್ಳು ನಾಟಕಗಳನ್ನು ಮಾಡಿದರು. ಆದರೆ, ಮತದಾರರು ಪ್ರತಿ ಕ್ಷಣವೂ ತಮ್ಮ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆಂದು ಹೇಳಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments