#Exclusive Newsರಾಜಕೀಯರಾಜ್ಯಸುದ್ದಿ

ಮಾರ್ಚ್ 22ರಂದು ಕರ್ನಾಟಕ ಬಂದ್; ಕನ್ನಡ ಸಂಘಟನೆಗಳಿಂದ ಮಹತ್ವದ ಘೋಷಣೆ

ಬೆಂಗಳೂರು: ಬಸ್ ಕಂಡಕ್ಟರ್ ಮೇಲೆ MES ಪುಂಡರಿಂದ ಹಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಉದ್ಧಟತನ ನಡೆಸುತ್ತಿರುವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಸಭೆ ನಡೆಸಿದ್ದು, ಸಭೆಯಲ್ಲಿ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಕರ್ನಾಟಕ ಬಂದ್ ಯಾವಾಗ?

ಮಾರ್ಚ್ 03 ರ ಬೆಳಗ್ಗೆ 11ಕ್ಕೆ ರಾಜಭವನ ಮುತ್ತಿಗೆ

ಮಾರ್ಚ್ 07 ಕ್ಕೆ ಬೆಳಗಾವಿ ಚಲೋ

ಮಾರ್ಚ್ 11 ರಂದು ಮೇಕೆದಾಟಿಗಾಗಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್

ಮಾರ್ಚ್ 14 ರಾಮನಗರ ಮಂಡ್ಯ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ

ಮಾರ್ಚ್ 17 ಹೊಸಕೋಟೆ – ಚೆನ್ನೈ ಹೆದ್ದಾರಿ ತಡೆ

ಮಾರ್ಚ್ 18 ಕನ್ನಡಪರ ಸಂಘಟನೆಗಳ ಸಭೆ

ಮಾರ್ಚ್ 22 ರಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಕರ್ನಾಟಕ ಬಂದ್ ನಡೆಸಲು ನಿರ್ಧಾರಿಸಲಾಗಿದೆ.

ಇನ್ನು ಸಭೆಯಲ್ಲಿ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆ ಅಧ್ಯಕ್ಷರು ಭಾಗವಹಸಿದ್ದರು.

Comments (0)

Your email address will not be published. Required fields are marked *

Back to top button