Thursday, September 11, 2025
20.3 C
Bengaluru
Google search engine
LIVE
ಮನೆ#Exclusive NewsTop Newsಡಿಸೆಂಬರ್​ 9 ರಿಂದ ವಿಧಾನಮಂಡದಲ್ಲಿ ಚಳಿಗಾಲ ಅಧಿವೇಶನ

ಡಿಸೆಂಬರ್​ 9 ರಿಂದ ವಿಧಾನಮಂಡದಲ್ಲಿ ಚಳಿಗಾಲ ಅಧಿವೇಶನ

ಬೆಳಗಾವಿ: ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ  ಡಿಸೆಂಬರ್​ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಅವರು ಅಧಿವೇಶನ ಕರೆದಿದ್ದಾರೆ. ಡಿಸೆಂಬರ್​ 9 ಸೋಮವಾರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ.

ಇತ್ತೀಚಿಗೆ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವಿಧಾಸಭಾಧ್ಯಕ್ಷ ಯು.ಟಿ ಖಾದರ್​ ಮತ್ತು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರಿಗಳ ಸಭೆ ನಡೆಸಿದ್ದರು. ಅಲ್ಲದೆ, ಅಧಿವೇಶನ ನಡೆಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡುವಂತೆ ಸೂಚನೆ ನೀಡಿದ್ದರು.ಈ ಬಾರಿಯ ಚಳಿಗಾಲ ಅಧಿವೇಶನ ಬಿಸಿ ಬಿಸಿ ಚರ್ಚೆ, ವಾಕ್ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ರೈತರ ನಿದ್ದೆಗೆಡಿಸಿರುವ ವಕ್ಫ್ ಆಸ್ತಿ ವಿವಾದ ಚರ್ಚೆಗೆ ಪ್ರಮುಖ ಬಿಂದುಗಳಾಗಬಹದು. ಈ ಎರಡೂ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಚಾಟಿ ಬೀಸಲು ವಿಪಕ್ಷಗಳು ತಯಾರಿ ನಡೆಸಿವೆ. ಹಾಗೇ ಉತ್ತರ ಕರ್ನಾಟಕದ ಜಲ್ವಂತರ ಸಮಸ್ಯೆಗಳಾದ ಮೂಲಭೂತ ಸೌಕರ್ಯದ ವಿಚಾರಕ್ಕೆ ಈ ಬಾರಿಯಾದರೂ ಪರಿಹಾರ ಸಿಗುತ್ತಾ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments