Wednesday, January 28, 2026
16.4 C
Bengaluru
Google search engine
LIVE
ಮನೆ#Exclusive NewsTop Newsರಾಜ್ಯದ 8 ರೈಲುಗಳ ಸಂಚಾರ 8 ದಿನಗಳ ಕಾಲ ರದ್ದು..! ಹಲವು ರೈಲುಗಳ ಮಾರ್ಗ ಬದಲಾವಣೆ,

ರಾಜ್ಯದ 8 ರೈಲುಗಳ ಸಂಚಾರ 8 ದಿನಗಳ ಕಾಲ ರದ್ದು..! ಹಲವು ರೈಲುಗಳ ಮಾರ್ಗ ಬದಲಾವಣೆ,

ಬೆಂಗಳೂರು: ವಾರಾಂತ್ಯದಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳುವವರಿಗೆ ನಿರಾಶೆ ಕಾದಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಹಾಗೇ ಕೆಲ ರೈಲುಗಳು ತಡವಾಗಿ ಆರಂಭವಾಗಲಿವೆ.

ನವೆಂಬರ್ 23 ರಂದು ನಿಡವಂದ ಯಾರ್ಡ್​ನಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ನಡೆಯಲಿದೆ. ತುಮಕೂರು-ಬಾಣಸವಾಡಿ ಮೆಮು ವಿಶೇಷ ರೈಲು (06512), ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ ರೈಲು (16239) ಮತ್ತು ಯಶವಂತಪುರ- ಚಿಕ್ಕಮಗಳೂರು ಡೈಲಿ ಎಕ್ಸ್ ಪ್ರೆಸ್ (16240) ರೈಲುಗಳ ಸಂಚಾರ ರದ್ದಾಗಲಿದೆ.

ಬೆಂಗಳೂರು: ರೈಲ್ವೆ ಕಾಮಗಾರಿ ಹಿನ್ನೆಲೆ ಕರ್ನಾಟಕದಿಂದ ಉತ್ತಮ ಭಾರತದ ನಡುವೆ ಸಂಚಾರ ನಡೆಸುವ ಪ್ರಮುಖ 22 ರೈಲುಗಳ ಸಂಚಾರವನ್ನು ನಿಗದಿತ ದಿನಾಂಕಗಳಂದು ರದ್ದು ಮಾಡಲಾಗಿದೆ. ಪ್ರಮುಖವಾಗಿ ಬೆಂಗಳೂರಿನಿಂದ ದೆಹಲಿ, ಪಾಟ್ನಾ, ದಾನ್‌ಪುರ್‌ಗೆ ಸಂಚರಿಸುವ ರೈಲುಗಳ ತಾತ್ಕಾಲಿಕ ರದ್ದಾಗುತ್ತಿವೆ.ರೈಲು ಸಂಚಾರ ರದ್ದುನವೆಂಬರ್ 23 ಮತ್ತು 24 ರಂದು ಕೆಎಸ್‌ಆರ್ ಬೆಂಗಳೂರು-ತುಮಕೂರು ಮಮು ವಿಶೇಷ (06571) ರೈಲು ಸೇವೆಯನ್ನು ದೊಡ್ಡಬೆಲೆ-ತುಮಕೂರು ನಡುವೆ ಮತ್ತು ತುಮಕೂರು-ಕೆಎಸ್‌ಆರ್ ಬೆಂಗಳೂರು ಮಮು ವಿಶೇಷ (06576) ರೈಲು ಸೇವೆಯನ್ನು ತುಮಕೂರು-ದೊಡ್ಡಬೆಲೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿವೆ. ನವೆಂಬರ್ 23 ರಂದು ಕೆಎಸ್‌ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ (06575) ರೈಲು ದೊಡ್ಡಬೆಲೆ-ತುಮಕೂರು ನಡುವೆ ಮತ್ತು ತುಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ (06572) ರೈಲು ಸೇವೆಯನ್ನು ತುಮಕೂರು-ದೊಡ್ಡಬೆಲೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments