Top Newsರಾಜಕೀಯವಾಣಿಜ್ಯಹಣಕಾಸು

ಬಜೆಟ್‌ನಲ್ಲಿ ಮನೆಗಳ ಹಬ್ಬ; ಆನೇಕಲ್‌ನಲ್ಲಿ ಇಂಟರ್‌ನ್ಯಾಷನಲ್ ಸ್ಟೇಡಿಯಂ ಘೋಷಣೆ!


ಬೆಂಗಳೂರು: “ಸರ್ವರಿಗೂ ಸೂರು” ಒದಗಿಸುವ ಸಂಕಲ್ಪದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಸತಿ ಇಲಾಖೆಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ರಾಜ್ಯಾದ್ಯಂತ ಬಾಕಿ ಇರುವ ಮತ್ತು ಪ್ರಗತಿಯಲ್ಲಿರುವ ಒಟ್ಟು 4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಪೈಕಿ ಪ್ರಸಕ್ತ ಸಾಲಿನಲ್ಲಿಯೇ 3 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸುವ ಬೃಹತ್ ಗುರಿಯನ್ನು ಬಜೆಟ್‌ನಲ್ಲಿ ಹಾಕಿಕೊಳ್ಳಲಾಗಿದೆ.

ವಸತಿ ರಹಿತರಿಗಾಗಿ ಹೊಸದಾಗಿ 1 ಲಕ್ಷ ಬಿಎಲ್‌ಸಿ (BLC) ಆಧಾರಿತ ಮನೆಗಳನ್ನು ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದೆ. ಇನ್ನು ಕ್ರೀಡಾ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿರುವ ಸಿಎಂ, ಬೆಂಗಳೂರಿನ ಆನೇಕಲ್ ತಾಲ್ಲೂಕಿನಲ್ಲಿ 8,000 ಆಸನ ಸಾಮರ್ಥ್ಯದ ಅಂತಾರಾಷ್ಟ್ರೀಯ ದರ್ಜೆಯ ಕ್ರೀಡಾಂಗಣ ನಿರ್ಮಾಣ ಮಾಡುವುದಾಗಿ ಪ್ರಕಟಿಸಿದ್ದಾರೆ. ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಲು ಅಗತ್ಯವಿರುವ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button