Friday, June 6, 2025
28 C
Bengaluru
Google search engine
LIVE
ಮನೆ#Exclusive NewsTop Newsಆರ್ ಸಿಬಿ ಫ್ರಾಂಚೈಸಿ ಪ್ರತಿನಿಧಿಗಳ ಬಂಧನಕ್ಕೆ CM ಆದೇಶ

ಆರ್ ಸಿಬಿ ಫ್ರಾಂಚೈಸಿ ಪ್ರತಿನಿಧಿಗಳ ಬಂಧನಕ್ಕೆ CM ಆದೇಶ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ,  ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಸಂಜೆ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಈಗಾಗಲೇ ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ದುರಂತಕ್ಕೆ ಕಾರಣರ್ಯಾರು ಎಂಬುದನ್ನು ಪತ್ತೆ ಹಚ್ಚಲು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲು ಸಿದ್ದರಾಮಯ್ಯ ಸರ್ಕಾರ ಆದೇಶ ನೀಡಿದೆ

ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments