ಬೆಂಗಳೂರು: ಕರ್ನಾಟಕದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮೆಡಿಕಲ್ ಕಾಲೇಜ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ ಮಾಡಿತ್ತು. ಇದರ ಬೆನ್ನಲ್ಲೆ ಇದೀಗ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ದರ ಪರಿಷ್ಕರಣೆ ಮಾಡಲು ಮುಂದಾಗಿದೆ.ಕರ್ನಾಟಕ ಸರ್ಕಾರವು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ವೆಚ್ಚವನ್ನು ಪರಿಷ್ಕರಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ,ಈ ಹೆಚ್ಚಳವು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿಲಗಲ್ಲ, ಬದಲಾಗಿ ಪ್ರತೀ ಎರಡು ಅಥವಾ ಮೂರು ವರ್ಷಕ್ಕೊಮ್ಮೆ ನಡೆಯುವ ಸಾಮಾನ್ಯ ದರ ಪರಿಷ್ಕರಣೆಯಾಗಿದೆ.
ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಲು ದರ ಪರಿಷ್ಕರಣೆ ಮಾಡುತ್ತಿಲ್ಲ. ಪ್ರತೀ ಎರಡರಿಂದ ಮೂರು ವರ್ಷಕ್ಕೊಮ್ಮೆ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ, ಈ ವರ್ಷವೂ ದರ ಪರಿಷ್ಕರಣೆ ಮಾಡಲಾಗುತ್ತೆ ಎಂದು ಹೇಳಿದರು. ಪರಿಷ್ಕೃತ ಬಳಿಕ ಚಿಕಿತ್ಸಾ ದರ ಶೇ 15 ರಿಂದ 20 ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ.