Top Newsರಾಜಕೀಯರಾಜ್ಯಸುದ್ದಿ

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು: ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ- ಕಾರಣ ಏನು?

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆಯಾಗಿದೆ.

ಸಾಲ ವಸೂಲಾತಿ ನೆಪದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಗ್ರಾಮಸ್ಥರು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ರೋಸಿ ಹೋಗಿ ಊರನ್ನೇ ತ್ಯಜಿಸಿದ್ದಾರೆ. ಇನ್ನು ಕೆಲವು ಗ್ರಾಮಗಳಲ್ಲಿ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲವು ಗ್ರಾಮಗಳಲ್ಲಿ ಮೈಕ್ರೋ ಫೈನಾನ್ಸ್​ನವರು ರಾತ್ರೋರಾತ್ರಿ ಮನೆ ಕಾಲಿ ಮಾಡಿಸಿದ್ದಾರೆ. ಈ ಕಿರುಕುಳದಿಂದ ಬೇಸತ್ತ ಜನರು ಮೈಕ್ರೋ ಫೈನಾನ್ಸ್​ನವರ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಇವೆಲ್ಲವನ್ನು ಕಂಡ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್​ನವರ ಕಿರುಕುಳಕ್ಕೆ ಬ್ರೇಕ್​ ಹಾಕಲು ಸುಗ್ರಿವಾಜ್ಞೆ ಮೂಲಕ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಈ ಸಂಬಂಧ ಹೊಸ ನಿಮಯಗಳನ್ನು ರಚಿಸಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಕರಡನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿತ್ತು. ಆದರೆ, ರಾಜ್ಯಪಾಲರು ಹಲವು ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆ ವಾಪಸ್​ ಕಳುಹಿಸಿದ್ದಾರೆ.

ಮಸೂದೆಯಲ್ಲಿ ಸಾಲ ಪಡೆದವರಿಗೆ ರಕ್ಷಣೆ ಇದೆ. ಆದ್ರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಇಲ್ಲ. ಅಲ್ಲದೇ ಆರ್‌ಬಿಐ ನಿಯಮಗಳು, ಪೊಲೀಸ್ ನಿಯಮಗಳಲ್ಲಿ ವ್ಯತಿರಿಕ್ತ ಪರಿಣಾಮಗಳಿವೆ. ಸಾಲಪಡೆದವರಿಗೆ ರಕ್ಷಣೆ ಇರುವಂತೆ, ಸಾಲ ಕೊಡುವವರಿಗೂ ರಕ್ಷಣೆ ಇರಬೇಕು. ವಿಧಾನ ಮಂಡಲ ಅಧಿವೇಶನ ಹತ್ತಿರದಲ್ಲೇ ಇದೆ. ಅಲ್ಲೇ ಮಸೂದೆ ಮಂಡನೆ ಮಾಡಿ, ಚರ್ಚೆ ಬಳಿಕ ಅಂಗೀಕಾರ ಮಾಡಬಹುದು ಎಂದು ರಾಜ್ಯಪಾಲರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ‌ ಹೇಗೆ ಹಾಕುತ್ತೀರಾ? ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಿ. ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ 10 ವರ್ಷ ವಿಧಿಸಲಾಗಿದೆ, ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ, ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರೋದಕ್ಕೆ ಮತ್ತೊಂದು ಕಾನೂನಿನ ಅಗತ್ಯತೆ ಕಾಣ್ತಿಲ್ಲ. ಆದ್ದರಿಂದ ಬಜೆಟ್ ಅಧಿವೇಶನದ ಹತ್ತಿರವಾಗ್ತಿರುವಾಗ ಸದನದಲ್ಲಿ ‌ಮಸೂದೆ ಮಂಡನೆ ಮಾಡಿ ಸಾದಕಬಾಧಕ ಚರ್ಚಿಸಿ ಎಂದು ತಿಳಿವಳಿಕೆ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button