ಬೆಂಗಳೂರು: ರಾಜಕೀಯ ಬೇರೆ, ರಾಜಕೀಯೇತರ ಕಾರ್ಯಕ್ರಮಗಳು ಬೇರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದಲ್ಲಿಂದು ( ಆಗಸ್ಟ್ 28) ಖಾಸಗಿ ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.
ಡಿಸಿಎಂ ಆಗಮಿಸುವ ಮುನ್ನವೇ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜ್ಯಪಾಲರು, ಡಿ.ಕೆ.ಶಿವಕುಮಾರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ಇಮೇಜುಗಳು ವೈರಲ್ ಆಗುತ್ತಿವೆ. ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮ ಇದಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ನಂತರ, ಇಡೀ ಕಾಂಗ್ರೆಸ್ ಸರ್ಕಾರ ಥಾವರ್ ಚಂದ್ ಗೆಹ್ಲೋಟ್ ವಿರುದ್ದ ತಿರುಗಿಬಿದ್ದಿದೆ. ಇದೇ ಬರುವ ಆಗಸ್ಟ್ 31ರಂದು ರಾಜಭವನ ಚಲೋ ಪ್ರತಿಭಟನೆಯನ್ನು ಡಿಕೆಶಿ ಸಾರಥ್ಯದಲ್ಲಿ ಆಯೋಜಿಸಲಾಗಿದೆ.

ಈ ಹಿನ್ನಲೆಯಲ್ಲಿ, ರಾಜ್ಯಪಾಲರು ಮತ್ತು ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡು, ಬಾಳೆಎಲೆ ಊಟ ಸವಿದು, ಫೋಟೋ ಕ್ಲಿಕ್ಕಿಸಿಕೊಂಡಿದ್ದು ಸುದ್ದಿಯಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳು ತಮ್ಮ ಪತ್ನಿಯ ಸಮೇತ ಆಗಮಿಸಿದ್ದರು.
ಕಾಂಗ್ರೆಸ್ ನಾಯಕ, ನಗರಾಭಿವೃದ್ದಿ ಖಾತೆಯ ಸಚಿವರೂ ಆಗಿರುವ ಬಿ.ಎಸ್.ಸುರೇಶ್ ಮತ್ತು ಯಲಹಂಕದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಕುಟುಂಬದ ನಡುವೆ ನೆಂಟಸ್ತನವಾಗಿದೆ. ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಮತ್ತು ಡಿಕೆಶಿ ಭಾಗವಹಿಸಿದ್ದರು.