ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ (Inquiry Commission) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನ ಮಂಡಲ ಅಧಿವೇಶನಕ್ಕೆ ಮುನ್ನಾ ದಿನವೇ ನಿವೃತ್ತ ನ್ಯಾಯಾಧೀಶರಾದ ಪಿ.ಎನ್ ದೇಸಾಯಿ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶಿಸಿದೆ. ಅಲ್ಲದೇ ಸಂಪೂರ್ಣಾ ತನಿಖಾ ವರದಿಯನ್ನು 6 ತಿಂಗಳ ಒಳಗೆ ಸಲ್ಲಿಸುವಂತೆ ವಿಚಾರಣಾ ಆಯೋಗಕ್ಕೆ ಸರ್ಕಾರ ಗಡುವು ನೀಡಿದೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೇ, ಈ ಕುರಿತು ದಿನ ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission Of Inquiry Act, 1952ರ (ವಿಚಾರಣಾ ಆಯೋಗ ಕಾಯ್ದೆ 1952) ನಿಮಯು 3ರ ಉಪನಿಯಮ (1) ಅನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗ ರಚಿಸಲು ಸರ್ಕಾರ ತೀರ್ಮಾನಿಸಿದೆ.
ಈ ಹಿನ್ನೆಲೆಯಲ್ಲಿ ಆರೋಪಗಳ ಬಗ್ಗೆ, ವಿಚಾರಣೆಯನ್ನು ನಡೆಸಲು Commission Of Inquiry Act, 1952ರ ನಿಮಯು 3ರ ಉಪನಿಯಮ (1) ಅನ್ವಯ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ನಿವೃತ್ತ ನ್ಯಾಯಾಧೀಶರಾದ ಪಿ.ಎನ್.ದೇಸಾಯಿ, ಅವರ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗ ರಚಿಸಿದೆ.
ಸದರಿ ವಿಚಾರಣಾ ಆಯೋಗವು Commission Of Inquiry Act, 1952 ಹಾಗೂ ಸಿವಿಲ್ ಪ್ರೊಸೀಜರ್ ಕೋಡ್ 1952 ನಲ್ಲಿನ ಅವಕಾಶದ ಅಡಿ ವಿಚಾರಣೆ ನಡೆಸಲು ಎಲ್ಲಾ ಅಧಿಕಾರ ಹೊಂದಿರುತ್ತದೆ. ತನಿಖೆಯನ್ನು 6 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕೆಂದು ಸರ್ಕಾರವು ಅಪೇಕ್ಷಿಸುತ್ತದೆ. ವಿಚಾರಣಾ ಆಯೋಗದ ಉಲ್ಲೇಖ ನಿಯಮಗಳನ್ನು ಪ್ರತ್ಯೇಕವಾಗಿ ಹೊರಡಿಲಾಗುತ್ತದೆ.
Phone Number : +91-9164072277
Email id : salesatfreedomtv@gmail.com