ದೆಹಲಿ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೆ ದಿನಗಳು ಬಾಕಿಯಿದ್ದು ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಈ ಮಧ್ಯೆ ಲೋಕ್ಪೋಲ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷಾ ವರದಿ ಬಹಿರಂಗ ಗೊಂಡಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ಗೆ 15-17 ಸ್ಥಾನ, ಬಿಜೆಪಿ-ಜೆಡಿಎಸ್ ಮೈತ್ರಿಗೆ 11 ರಿಂದ 13 ಸ್ಥಾನ ಪಡೆದಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಲೋಕ್ಪೋಲ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷಾ ವರದಿಯಲ್ಲಿ ಕಾಂಗ್ರೆಸ್ 125-134 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಹೇಳಿತ್ತು. ಚುನಾವಣೆ ನಡೆದ ನಂತರ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಿದೆ. ಕಳೇದ ಬಾರಿಯ ಲೋಕ್ಪೋಲ್ ವರದಿ ಖಚಿತವಾಗಿದ್ದು, ಆದ್ದರಿಂದ ಲೋಕ್ ಪೋಲ್ ಸಮೀಕ್ಷಾ ವರದಿ ಫಲಿತಾಂಶದ ನಿರೀಕ್ಷೆ ಹೆಚ್ಚಿದೆ. ಈ ವರದಿಯಿಂದ ಕಮಲ ಪಾಳಯದಲ್ಲಿ ತಳಮಳ ಶುರುವಾಗಿದೆ.


- ರಾಜ್ಯದಲ್ಲಿ ಕಾಂಗ್ರೆಸ್ಗೆ 15 ರಿಂದ 17 ಸ್ಥಾನ, ಬಿಜೆಪಿ-ಜೆಡಿಎಸ್ ಮೈತ್ರಿಗೆ 11-13 ಸ್ಥಾನ
- ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ 134 ಸ್ಥಾನ ನೀಡಿದ್ದ ಲೋಕ್ಪೋಲ್
- ಕರ್ನಾಟಕದಲ್ಲಿ ಏ.26ಕ್ಕೆ ಮೊದಲ ಹಂತದ ಮತದಾನ ಮೇ7ಕ್ಕೆ 2ನೇ ಹಂತದ ಮತದಾನ, ಜೂನ್ 4ಕ್ಕೆ ಫಲಿತಾಂಶ
ಐದು ಗ್ಯಾರಂಟಿ ಯೋಜನೆಗಳ ಅಲೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಕಾಂಗ್ರೆಸ್ ಮುಂದಾಗಿದ್ದು, ಇದಕ್ಕೆ ತಡೆಯೊಡ್ಡಲು ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು 20 ಸ್ಥಾನ ಗೆಲ್ಲುವ ಇರಾದೆಯಲ್ಲಿದೆ ಬಿಜೆಪಿ. ಚುನಾವಣಾ ಪೂರ್ವ ಸಮೀಕ್ಷಾ ವರದಿ ಗಮನಿಸಿದರೇ ಗ್ಯಾರಂಟಿ ಅಲೆ ಮುಂದೆ ಮೋದಿ ಅಲೆ ಮಂಕಾಗಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಕಾಂಗ್ರೆಸ್ ಒಂದೇ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಕೂಡ ಒಂದೇ ಒಂದು ಸ್ಥಾನ ಗೆದ್ದುಕೊಂಡಿತ್ತು. ಪಕ್ಷೇತರ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದರು.
ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ಇದ್ದು, ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಹುತೇಕ ನಿಖರ ಅಂಕಿ ಅಂಶ ನೀಡಿದ್ದ ಲೋಕ್ ಪೋಲ್ ಸಮೀಕ್ಷೆಯು ಇದೀಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎಷ್ಟು ಸ್ಥಾನಗಳನ್ನು ಗೆಲ್ಲಲಿವೆ ಎನ್ನುವುದನ್ನು ಹೇಳಿದೆ.
ಲೋಕ್ ಪೋಲ್ ಸಮೀಕ್ಷೆ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ ಇದ್ದು, ಬಿಜೆಪಿ ಕೇವಲ ಗೆಲ್ಲುವ ಸಾಧ್ಯತೆ ಇದೆ ಎಂದ ವರದಿಯಿಂದ ಕಾಂಗ್ರೆಸ್ನಲ್ಲಿ ಮತ್ತಷ್ಟು ಚೈತನ್ಯ ಮೂಡಿಸಿದೆ. 28 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ.