Wednesday, January 28, 2026
17 C
Bengaluru
Google search engine
LIVE
ಮನೆ#Exclusive NewsTop News1500 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲು ನಿಲ್ದಾಣ ಅಭಿವೃದ್ಧಿ ಮಾಡ್ತೇವೆ: ಸಚಿವ ವಿ ಸೋಮಣ್ಣ

1500 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲು ನಿಲ್ದಾಣ ಅಭಿವೃದ್ಧಿ ಮಾಡ್ತೇವೆ: ಸಚಿವ ವಿ ಸೋಮಣ್ಣ

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣನವರು ಮೆಜೆಸ್ಟಿಕ್ ರೈಲು ನಿಲ್ದಾಣವನ್ನು 1500 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಿಸಿದ್ದಾರೆ.

ಬೆಂಗಳೂರು: ಏರ್​​ಪೋರ್ಟ್​ ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ  ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್​ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ  ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿ ಮುಂದೆ ಇಡುತ್ತೇವೆ. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ನರೇಂದ್ರ ಮೋದಿ ಬೇಡ ಎನ್ನುವುದಿಲ್ಲ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ ಚರ್ಚಿಸಿ ಕೆಲಸ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.ಸುಮಾರು 1500 ಕೋಟಿ ರೂ. ವೆಚ್ಚದಲ್ಲಿ ಏರ್​ಪೋರ್ಟ್​ಗಿಂತ ವಿಭಿನ್ನವಾಗಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ. ಏರ್​ಪೋರ್ಟ್​ನಲ್ಲಿ ಸಿಗುವ ಎಲ್ಲಾ ಸವಲತ್ತುಗಳು ಸಿಗಲಿದೆ. 160 ಎಕರೆ ಜಾಗ ಇದೆ. ನಿರೋದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments