ಬೆಂಗಳೂರು: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿರುವ ಬಗ್ಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಮಾಹಿತಿ ನೀಡಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ವಿಕ್ರಮ್ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಕಳೆದ 20 ವರ್ಷಗಳಿಂದ ಆತನನ್ನು ಪೊಲೀಸರು ಹುಡುಕುತ್ತಿದ್ದರು. ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಹಿಂದೆ ನಡೆದ ಅನೇಕ ಎನ್ಕೌಂಟರ್ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ ಎಂದರು.ನಿನ್ನೆ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಆತನ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದರು. ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ಸೋಮವಾರ ರಾತ್ರಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ. ಆತ ಆತ ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ್ದ. ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಆತನ ಜತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರೆದಿದೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು.


