Wednesday, April 30, 2025
26.6 C
Bengaluru
LIVE
ಮನೆ#Exclusive Newsನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ ಮಂಡಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ ಮಂಡಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು, ಜು.25- ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯನ್ನು ರದ್ದುಪಡಿಸಿ ಹಳೆಯ  ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವ್ಯವಸ್ಥೆಯನ್ನೇ ಮುಂದುವರೆಸುವ  ಮಹತ್ವದ ನಿರ್ಣಯವನ್ನು ವಿಧಾಮಂಡಲದ ಉಭಯ ಸದನಗಳಲ್ಲಿ ಗುರುವಾರ ಮಂಡಿಸಿ ಅಂಗೀಕರಿಸಲಾಗಿದೆ.ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಹಾಗೂ ವಿಧಾನಪರಿಷತ್ ನಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು. ಪ್ರತಿಪಕ್ಷಗಳ ಸದಸ್ಯರು ಈ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದ ನಂತರ ಸದನವು ಅಂಗೀಕರ ನೀಡಿತು.ವಿಧಾನಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನಿರ್ಣಯದ ಮೇಲೆ ಮಾತನಾಡಿ,  ನೀಟ್ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತಿದೆ. ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಹೀಗಾಗಿ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕು, ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಅಂಕಗಳನ್ನು ಆಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಮತ್ತು ನೀಟ್ ಪರೀಕ್ಷೆಯಲ್ಲಿ ಆಗುತ್ತಿರುವ ಪುನರಾವರ್ತಿತ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ವ್ಯವಸ್ಥೆಯನ್ನು ರದ್ದುಪಡಿಸುವುದು. ಜೊತೆಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವೈದ್ಯಕೀಯ ಆಯೋಗ ಅದಿನಿಯಮ 2019ರಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು ಎಂದು ಮನವಿ ಮಾಡಿದರು. ಸಭಾಧ್ಯಕ್ಷ ಯು ಟಿ ಖಾದರ್ ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು.

 

ಪರಿಷತ್ನಲ್ಲೂ ಅಂಗೀಕಾರ:

ನೀಟ್  ಪರೀಕ್ಷೆಯನ್ನು ರದ್ದು ಮಾಡಿ ಕರ್ನಾಟಕ ಸರ್ಕಾರದವತಿಯಿಂದಲೇ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಕ್ಕಾಗಿ  ನಡೆಯುವ ಸಿಇಟಿಯನ್ನೇ  ಮುಂದುವರಿಸುವ ನಿರ್ಣಯಕ್ಕೆ ವಿಧಾನಪರಿಷತ್ನಲ್ಲೂ ಅಂಗೀಕಾರ ಸಿಕ್ಕಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರತಿಪಕ್ಷಗಳು ವಿರೋಧದ ನಡುವೆಯೂ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯ ಅಂಗೀಕಾರವಾಗಿದೆ ಎಂದು ಘೋಷಣೆ ಮಾಡಿದರು. ಇದಕ್ಕೂ ಮುನ್ನ  ನಿರ್ಣಯದ ಮೇಲೆ ಮಾತನಾಡಿದ ಶಿವಕುಮಾರ್  ಅವರು,  ಇತ್ತೀಚೆಗೆ ದೇಶಾದ್ಯಂತ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳು ಉಂಟಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ನೀಟ್ನಿಂದ ವಿನಾಯ್ತಿ ನೀಡಿ ಕರ್ನಾಟಕ ಸರ್ಕಾರ ಪ್ರತಿ ವರ್ಷ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗೆ ನಡೆಯುವ ಸಿಇಟಿಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು  ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು

ಸಚಿವ ಡಾ.ಶರಣಪ್ರಕಾಶ್ ಪಾಟೀಲ್

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments