
ಬೆಂಗಳೂರು: ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಎಲ್ಲ 6,000 ಗ್ರಾಮ ಪಂಚಾಯಿತಿಗಳನ್ನು ‘ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ‘ಗ್ರಾಮ ಸ್ವರಾಜ್’ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಉದ್ದೇಶದಿಂದ ಈ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ.
ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಯೋಜನೆಗಳಲ್ಲಿ ಗಾಂಧೀಜಿಯವರ ಹೆಸರು ಕೈಬಿಟ್ಟಿರುವುದನ್ನು ವಿರೋಧಿಸಿರುವ ರಾಜ್ಯ ಸರ್ಕಾರ, ಗ್ರಾಮ ಪಂಚಾಯಿತಿಗಳ ಹೆಸರಿನಲ್ಲೇ ಗಾಂಧಿ ನಾಮವನ್ನು ಶಾಶ್ವತಗೊಳಿಸಲು ಮುಂದಾಗಿದೆ. ಈ ನಿರ್ಧಾರದ ಮೂಲಕ ಸ್ಥಳೀಯ ಆಡಳಿತ ವ್ಯವಸ್ಥೆಯಲ್ಲಿ ಗಾಂಧೀಜಿಯವರ ತತ್ವಗಳನ್ನು ಮರುಸ್ಥಾಪಿಸಲು ಸರ್ಕಾರ ಗುರಿ ಹೊಂದಿದೆ. ಇನ್ಮುಂದೆ ರಾಜ್ಯದ ಪ್ರತಿ ಹಳ್ಳಿಯ ಪಂಚಾಯಿತಿ ಕಚೇರಿಗಳು ಗಾಂಧೀಜಿಯವರ ಹೆಸರಿನಲ್ಲೇ ಗುರುತಿಸಿಕೊಳ್ಳಲಿವೆ.




