Thursday, November 20, 2025
21.7 C
Bengaluru
Google search engine
LIVE
ಮನೆಮನರಂಜನೆಹೊಸವರ್ಷಕ್ಕೆ ಕರುನಾಡ ಚಕ್ರವರ್ತಿ ಹೊಸಚಿತ್ರ ಶಿವಣ್ಣನ ಸಿನಿಮಾ ಟೈಟಲ್ ಬಿಡುಗಡೆ…!

ಹೊಸವರ್ಷಕ್ಕೆ ಕರುನಾಡ ಚಕ್ರವರ್ತಿ ಹೊಸಚಿತ್ರ ಶಿವಣ್ಣನ ಸಿನಿಮಾ ಟೈಟಲ್ ಬಿಡುಗಡೆ…!

Shiva Rajkumar; ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸ ವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್. ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ.

ಪ್ರೀ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗುತ್ತಿದೆ. ಉಳಿದ ತಾರಾ ಬಳಗ ಹಾಗೂ ತಾಂತ್ರಿಕವರ್ಗದ ಆಯ್ಕೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿ ಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ಕೂತುಹಲ ಮೂಡಿದ್ದು, ಸಿನಿಮಾ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments