Top Newsರಾಜ್ಯ

ಬೋವಿನಿಗಮ ಹಗರಣ – 26 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿಗಳಿಗೆ ಸೇರಿದ 26.27 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಪ್ರಕರಣದ ಆರೋಪಿಗಳಾದ ಬಿ.ಕೆ.ನಾಗರಾಜಪ್ಪ, ಆರ್.ಲೀಲಾವತಿ ಮತ್ತು ಇತರೆ ಆರೋಪಿಗಳ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಂಡಿದೆ

ಭೋವಿ ಅಭಿವೃದ್ಧಿ ನಿಗಮದಲ್ಲಿ 2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿತ್ತು.

ಲಕ್ಷಾಂತರ ರೂ. ಸಾಲ ಕೊಡಿಸುವ ನೆಪದಲ್ಲಿ ಸಾರ್ವಜನಿಕರ ದಾಖಲೆ ದುರ್ಬಳಕೆ ಮಾಡಿಕೊಳ್ಳುವ ಜೊತೆ 10 ಕೋಟಿ ರೂಪಾಯಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಆಗಿದೆ ಎಂಬ ಆರೋಪವಿದೆ.

ಭೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ, ನಿಗಮದ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪ, ಮಾಜಿ ಅಧೀಕ್ಷಕ ಸುಬ್ಬಪ್ಪ ಈ ಹಗರಣದಲ್ಲಿ ಭಾಗಿಯಾದ ಆರೋಪವಿದೆ

Comments (0)

Your email address will not be published. Required fields are marked *

Back to top button